

ಸೋಮವಾರ ಉಭಯ ನಾಯಕರು ದೂರವಾಣಿ ಸಂಭಾಷಣೆ ನಡೆಸಿದ್ದು, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಪ್ರಧಾನಿ ನರೇಂದ್ರ ಮೋದಿಯವರ ವಾರ್ಷಿಕ ಉನ್ನತ ಮಟ್ಟದ ಸಭೆಗಾಗಿ ಭಾರತಕ್ಕೆ ಭೇಟಿ ನೀಡಬೇಕೆಂಬ ಆಹ್ವಾನವನ್ನು ಸ್ವೀಕರಿಸಿದ್ದಾರೆ ಎಂದು ವರದಿಯಾಗಿದೆ.
Russia Support : ವಾರ್ಷಿಕ ಉನ್ನತ ಮಟ್ಟದ ಸಭೆಗಾಗಿ ಭಾರತಕ್ಕೆ ಭೇಟಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿಯವರ ಆಹ್ವಾನವನ್ನು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸ್ವೀಕರಿಸಿದ್ದಾರೆ ಎಂದು ಹೇಳಲಾಗಿದೆ.
ವಾರ್ಷಿಕ ದ್ವಿಪಕ್ಷೀಯ ಶೃಂಗಸಭೆಗಾಗಿ ಭಾರತಕ್ಕೆ ಭೇಟಿ ನೀಡುವಂತೆ ರಷ್ಯಾದ ಅಧ್ಯಕ್ಷರಿಗೆ ಆಹ್ವಾನವನ್ನು ನೀಡಲಾಯ್ತು. ಈ ಆಹ್ವಾನವನ್ನು ಕೃತಜ್ಞತೆಯಿಂದ ಸ್ವೀಕರಿಸಲಾಗಿದೆ ಎಂದು ಕ್ರೆಮ್ಲಿನ್ ಹೇಳಿಕೆಯಲ್ಲಿ ತಿಳಿಸಿದೆ.
ರಷ್ಯಾ ಅಧ್ಯಕ್ಷ ಪ್ಲಾಡಿಮಿರ್ ಪುಟಿನ್, ಭಾರತ ಪ್ರಧಾನಿ ನರೇಂದ್ರ ಮೋದಿಗೆ ದೂರವಾಣಿ ಕೆರೆ ಮಾಡಿ, ಪಹಲ್ಲಾಮ್ ಭಯೋತ್ಪಾದಕ ದಾಳಿ ಖಂಡಿಸಿದ್ದಾರೆ. ಭಯೋತ್ಪಾದನೆ ವಿರುದ್ಧ ಭಾರತ ಹೋರಾಟವನ್ನು ಬೆಂಬಲಿಸುವುದಾಗಿ ಹೇಳಿದ್ದಾರೆ ಎಂದು ವರದಿಯಾಗಿದೆ.
(ಏಜೆನ್ಸೀಸ್)
ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ನಡೆದ ಕ್ರೂರ ಭಯೋತ್ಪಾದಕ ದಾಳಿಯಲ್ಲಿ ಭಾರತೀಯ ನಾಗರಿಕರ ಹತ್ಯೆಗೆ ಅಧ್ಯಕ್ಷ ಪುಟಿನ್ ಮತ್ತೊಮ್ಮೆ ತಮ್ಮ ಪ್ರಾಮಾಣಿಕ ಸಂತಾಪ ವ್ಯಕ್ತಪಡಿಸಿದ್ದಾರೆ ಮತ್ತು ಭಯೋತ್ಪಾದನೆಯ ಎಲ್ಲಾ ರೂಪಗಳು ಮತ್ತು ಅಭಿವ್ಯಕ್ತಿಗಳನ್ನು ಎದುರಿಸುವಲ್ಲಿ ರಷ್ಯಾ ಭಾರತದೊಂದಿಗೆ ನಿಲ್ಲುತ್ತದೆ ಎಂದು ಪ್ರಧಾನಿ ಮೋದಿ ಅವರಿಗೆ ಭರವಸೆ ನೀಡಿದ್ದಾರೆ.