ಹೆಬ್ರಿ: ಕಲಿಕೆಗೆ ಮಾಧ್ಯಮ ಮುಖ್ಯವಲ್ಲ. ಆಸಕ್ತಿ, ಅಭಿರುಚಿ ಇಟ್ಟುಕೊಂಡು ಕನ್ನಡ ಮಾಧ್ಯಮ ಶಾಲೆಯಲ್ಲಿ ಕಲಿತ ಅನೇಕ ಮಂದಿ ಉನ್ನತ ಉದ್ಯೋಗ ಗಿಟ್ಟಿಸಿಕೊಂಡು ಜೀವನದಲ್ಲಿ ಯಶಸ್ಸು ಪಡೆದುಕೊಂಡದ್ದನ್ನು ನಮ್ಮೂರಿನಲ್ಲೇ ಕಾಣುತ್ತಿದ್ದೇವೆ ಎಂದು ಮುದ್ರಾಡಿ ಗುರುರಕ್ಷಾ ಸೌಹಾರ್ದ ಸಹಕಾರಿ ಸೊಸೈಟಿ ಅಧ್ಯಕ್ಷ ಎಂ.ಮಂಜುನಾಥ ಪೂಜಾರಿ ಹೇಳಿದರು.
ಮುದ್ರಾಡಿ ಬಲ್ಲಾಡಿ ತುಂಡುಗುಡ್ಡೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಳೇ ವಿದ್ಯಾರ್ಥಿ ಸಂಘ ಆಶ್ರಯದಲ್ಲಿ ವಾರ್ಷಿಕ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದರು.
ಮುದ್ರಾಡಿ ಪಂಚಾಯಿತಿ ಹಿರಿಯ ಸದಸ್ಯ ಗಣಪತಿ ಎಂ. ಮಾತನಾಡಿದರು. ಮುದ್ರಾಡಿ ಗ್ರಾಪಂ ಅಧ್ಯಕ್ಷೆ ವಸಂತಿ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.
ಮುದ್ರಾಡಿ ಗ್ರಾಪಂ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಮಂಜುನಾಥ್ ಹೆಗ್ಡೆ, ಉಪಾಧ್ಯಕ್ಷೆ ರಮ್ಯಾಕಾಂತಿ, ಸದಸ್ಯರಾದ ರತ್ನ ಪೂಜಾರಿ, ಶಾಂತಾ ದಿನೇಶ್ ಪೂಜಾರಿ, ಪಂಚಾಯಿತಿ ಮಾಜಿ ಸದಸ್ಯ ಸಂತೋಷ್ ಕುಮಾರ್ ಶೆಟ್ಟಿ, ಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ಗುಣಕರ ಶೆಟ್ಟಿ, ಹಳೇ ವಿದ್ಯಾರ್ಥಿ ಸಂಘದ ಪ್ರತಿನಿಧಿ ಸೂರಜ್ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶಂಕರ ಕುಲಾಲ್, ಸಮಿತಿ ಗೌರವಾಧ್ಯಕ್ಷ ಮಧುಸೂದನ್ ಭಟ್, ಮುಖ್ಯ ಶಿಕ್ಷಕಿ ಚಿತ್ರಾ, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಸುಮತಿ, ಶಾಲಾ ವಿದ್ಯಾರ್ಥಿ ನಾಯಕ ಶ್ರವಣ್ ಉಪಸ್ಥಿತರಿದ್ದರು. ಶಾಲೆಯ ಅಭಿವೃದ್ಧಿಯಲ್ಲಿ ಸದಾ ತೊಡಗಿಸಿಕೊಂಡ ನಿವೃತ್ತ ಮುಖ್ಯ ಶಿಕ್ಷಕ ಗುಣಕರ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಪ್ರತಿಭಾ ಪುರಸ್ಕಾರಕ್ಕೆ ಸಹಕರಿಸಿದ ದಾನಿಗಳನ್ನು ಗೌರವಿಸಲಾಯಿತು. ಶಾಲಾಭಿವೃದ್ಧಿ ಸಮಿತಿ ಗೌರವಾಧ್ಯಕ್ಷ ಮಧುಸೂದನ್ ಭಟ್ ಸ್ವಾಗತಿಸಿದರು. ಶಿಕ್ಷಕ ಬಲ್ಲಾಡಿ ಚಂದ್ರಶೇಖರ ಭಟ್ ಕಾರ್ಯಕ್ರಮ ನಿರೂಪಿಸಿದರು. ಹಳೆ ವಿದ್ಯಾರ್ಥಿನಿ ಅನುಪಮಾ ಶೆಟ್ಟಿ ವಂದಿಸಿದರು.