ನೆರವಿನಿಂದ ಋಣಭಾರ ಇಳಿಕೆ : ಎನ್.ಸತ್ಯನಾರಾಯಣ ಹೊಳ್ಳ ಹೆೇಳಿಕೆ: ಎಸ್‌ಡಿಎಂ ನೆನಪಿನಂಗಳ ಪುನರ್ಮಿಲನ

sdm
ಎಸ್‌ಡಿಎಂ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ವಾರ್ಷಿಕ ಪುನರ್ಮಿಲನ ಕಾರ್ಯಕ್ರಮ ಎನ್.ಸತ್ಯನಾರಾಯಣ ಹೊಳ್ಳ ಉದ್ಘಾಟಿಸಿದರು. ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್., ಪ್ರಾಂಶುಪಾಲ ಡಾ.ಬಿ.ಎ.ಕುಮಾರ ಹೆಗ್ಡೆ, ಹಿರಿಯ ವಿದ್ಯಾರ್ಥಿ ಸಂಘ ಕಾರ್ಯದರ್ಶಿ ಬಿ.ಕೆ. ಧನಂಜಯ ರಾವ್ ಮತ್ತಿತರರು ಇದ್ದರು.
Published on

ಬೆಳ್ತಂಗಡಿ : ಋಣಭಾರ ಕಡಿಮೆಯಾಗದ ಹೊರತು ಜೀವನ ಸಾರ್ಥಕ್ಯ ಕಾಣಲಾರದು. ಸಮಾಜಕ್ಕೆ ಕೊಡುಗೆ ನೀಡುವ ಮೂಲಕ ಋಣಭಾರ ಕಡಿಮೆ ಮಾಡಿಕೊಳ್ಳಬಹುದು ಎಂದು ಉಜಿರೆ ಎಸ್‌ಡಿಎಂ ಕಾಲೇಜು ಹಿರಿಯ ವಿದ್ಯಾರ್ಥಿಗಳ ಸಂಘದ ಬೆಂಗಳೂರು ಘಟಕದ ಅಧ್ಯಕ್ಷ ಎನ್.ಸತ್ಯನಾರಾಯಣ ಹೊಳ್ಳ ಹೇಳಿದರು.

ಶನಿವಾರ ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ಸಂಘದ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಹಿರಿಯ ವಿದ್ಯಾರ್ಥಿಗಳ ವಾರ್ಷಿಕ ಪುನರ್ಮಿಲನ (ಎಸ್‌ಡಿ ಎಂ ನೆನಪಿನಂಗಳ ವಾರ್ಷಿಕ ಪುನರ್ಮಿಲನ 2024) ಉದ್ಘಾಟಿಸಿ ಮಾತನಾಡಿದರು. ಸಮಾಜದಲ್ಲಿ ವ್ಯಕ್ತಿಗೆ ವಿದ್ಯಾಋಣ, ಅನ್ನಋಣ ಇತ್ಯಾದಿ ಋಣಗಳಿರುತ್ತವೆ. ಅದು ದೊಡ್ಡ ಭಾರವಾಗಿದ್ದು, ಸಮಾಜಕ್ಕೆ ಮರಳಿ ಕೊಡುಗೆ ನೀಡುವ ಮೂಲಕ ಋಣದ ಹೊರೆ ಕಡಿಮೆ ಮಾಡಿಕೊಳ್ಳಬಹುದು. ನೈತಿಕ ಬೆಂಬಲ ನೀಡುವುದು, ಧನಸಹಾಯ ನೀಡುವುದು, ಸಂಘ ಸಂಸ್ಥೆಗಳ ಮೂಲಕ ನೆರವು ನೀಡುವುದು ಇತ್ಯಾದಿ ಕ್ರಮಗಳ ಮೂಲಕ ಋಣಭಾರ ಇಳಿಸಿಕೊಳ್ಳಬಹುದು ಎಂದರು.

ಪ್ರಾಂಶುಪಾಲ ಡಾ.ಬಿ.ಎ.ಕುಮಾರ ಹೆಗ್ಡೆ, ಹಿರಿಯ ವಿದ್ಯಾರ್ಥಿ ಸಂಘ ಕಾರ್ಯದರ್ಶಿ ಬಿ.ಕೆ. ಧನಂಜಯ ರಾವ್ ಮಾತನಾಡಿದರು. ಹಿರಿಯ ವಿದ್ಯಾರ್ಥಿ ಸಂಘ ಅಧ್ಯಕ್ಷ ಪೀತಾಂಬರ ಹೆರಾಜೆ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ವಿದ್ಯಾರ್ಥಿಗಳ ಮಧ್ಯಾಹ್ನದ ಊಟಕ್ಕೆ ಸಂಘದ ವತಿಯಿಂದ 5 ಲಕ್ಷ ರೂ. ಚೆಕ್ ಹಸ್ತಾಂತರಿಸಲಾಯಿತು. ಕ್ರೀಡಾ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ಕಾಲೇಜಿನ ವಿದ್ಯಾರ್ಥಿಗಳಾದ ಸುಶಾಂತ್ ಶೆಟ್ಟಿ ಮತ್ತು ಸಿರಿ ಶರ್ಮ ಅವರನ್ನು ಸನ್ಮಾನಿಸಲಾಯಿತು.

ಸಂಘದ ಉಪಾಧ್ಯಕ್ಷ ಗುರುನಾಥ ಪ್ರಭು, ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು, ಎಸ್‌ಡಿಎಂ ಎಜುಕೇಶನಲ್ ಸೊಸೈಟಿ ಹಾಗೂ ಸ್ಥಳೀಯ ಎಸ್‌ಡಿಎಂ ಸಂಸ್ಥೆ ಸಿಬ್ಬಂದಿ ಉಪಸ್ಥಿತರಿದ್ದರು.

ಸಂಘದ ಕಾರ್ಯಕ್ರಮ ಸಂಯೋಜಕ ಡಾ.ಎಂ.ಪಿ.ಶ್ರೀನಾಥ್ ವಂದಿಸಿ. ಡಾ.ದಿವಾಕರ ಕೆ.ಮತ್ತು ದಿವ್ಯಾ ಕುಮಾರಿ ನಿರೂಪಿಸಿದರು. ಉಡುಪಿಯ ಕಲಾಮಯಂ ತಂಡದವರಿಂದ ವಿಶೇಷ ರಸಮಂಜರಿ ಕಾರ್ಯಕ್ರಮ ನಡೆಯಿತು.

ಗ್ರಾಮೀಣ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸನ್ನು ನನಸಾಗಿಸುವ ನಿಟ್ಟಿನಲ್ಲಿ ಧರ್ಮಸ್ಥಳದ ಅಂದಿನ ಧರ್ಮಾಧಿಕಾರಿ ರತ್ನವರ್ಮ ಹೆಗ್ಗಡೆ ಅವರಿಂದ ಪ್ರಾರಂಭವಾದ ಉಜಿರೆ ಎಸ್‌ಡಿಎಂ ಕಾಲೇಜು 58 ವರ್ಷಗಳಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಜೀವನೋಪಾಯ ಮಾತ್ರವಲ್ಲದೆ, ಉತ್ತಮ ಬದು ಕು ನೀಡಿದೆ. ವೀರೇಂದ್ರ ಹೆಗ್ಗಡೆ ಅವರ ಪೋಷಣೆಯಲ್ಲಿ ಸಂಸ್ಥೆ ಇನ್ನಷ್ಟು ಬೆಳೆದಿದೆ. ಸಂಸ್ಥೆಯಿಂದ ಔದ್ಯೋಗಿಕ, ವೈಯಕ್ತಿಕ ಕೊಡುಗೆ ಪಡೆದಿರುವ ನಾವು ಪ್ರಸ್ತುತ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ರೀತಿಯಲ್ಲಿ ಕೊಡುಗೆ ನೀಡುವುದು ನಮ್ಮ ಜವಾಬ್ದಾರಿ. ಹಿರಿಯ ವಿದ್ಯಾರ್ಥಿಗಳಿಂದ ಸಂಸ್ಥೆಗೆ ಶ್ರೇಷ್ಠತೆ ಬರುತ್ತದೆ. ಅವರಿಂದ ಸಂಸ್ಥೆಗೆ ಬ್ರ್ಯಾಂಡ್ ವ್ಯಾಲ್ಯೂ ಲಭಿಸಿದೆ. ಸಂಸ್ಥೆ ಷಷ್ಠೃಬ್ದಿ ಕೂಡ ಉತ್ತಮ ರೀತಿಯಲ್ಲಿ ಆಚರಿಸುವಂತಾಗಲಿ. - ಡಾ.ಸತೀಶ್ಚಂದ್ರ ಎಸ್., ಕಾರ್ಯದರ್ಶಿ, ಎಸ್‌ಡಿಎಂ ಶಿಕ್ಷಣ ಸಂಸ್ಥೆ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net