More

    ಮಕ್ಕಳ ಮನಸ್ಸು ಅರಳಿಸಲು ಕ್ರೀಡೆ ಪೂರಕ

    ಭಾಲ್ಕಿ: ಮಕ್ಕಳ ಮನಸ್ಸು ಅರಳಿಸಲು ಕ್ರೀಡೆಗಳು ಪೂರಕವಾಗಿದ್ದು, ವಿದ್ಯಾಭ್ಯಾಸದ ಜತೆಗೆ ಕ್ರೀಡೆಯಲ್ಲಿಯೂ ಹೆಚ್ಚು ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್​ ಅಧ್ಯಕ್ಷ ನಾಡೋಜ ಶ್ರೀ ಡಾ.ಬಸವಲಿಂಗ ಪಟ್ಟದ್ದೇವರು ನುಡಿದರು.

    ಕರಡ್ಯಾಳ ಚನ್ನಬಸವೇಶ್ವರ ಗುರುಕುಲ ಪಬ್ಲಿಕ್ ಶಾಲೆಯಲ್ಲಿ ಶನಿವಾರ ಆಯೋಜಿಸಿದ್ದ ಶಾಲಾ ಮಟ್ಟದ ವಾರ್ಷಿಕ ಕ್ರೀಡಾಕೂಟ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದ ಶ್ರೀಗಳು, ಮಕ್ಕಳು ಶಾರೀರಿಕ ಮತ್ತು ದೈಹಿಕ ಬೆಳೆವಣಿಗೆಗೆ ಹೊಂದಲು ಕ್ರೀಡೆ ಅತ್ಯಂತ ಸಹಕಾರಿಯಾಗಿದೆ. ಭಾರತ ಹಿಂದಿಗಿಂತಲೂ ಕ್ರೀಡಾ ಕ್ಷೇತ್ರದಲ್ಲಿ ಅದ್ಭುತ ಸಾಧನೆ ಮಾಡುತ್ತಿದ್ದು, ಒಲಂಪಿಕ್ಸ್​ನಲ್ಲಿ ಭಾರತ ಕ್ರೀಡಾಪಟುಗಳು ಉತ್ತಮ ಪ್ರದರ್ಶನ ತೋರಿ ದಾಖಲೆ ಪದಕಗಳನ್ನು ದೇಶಕ್ಕೆ ತಂದು ಕೊಟ್ಟಿದ್ದಾರೆ. ಕ್ರೀಡಾ ಕ್ಷೇತ್ರದಲ್ಲಿಯೂ ಸಾಧನೆಗೆ ವಿಪುಲ ಅವಕಾಶಗಳಿವೆ ಎಂದು ಹೇಳಿದರು.

    ನೇತೃತ್ವ ವಹಿಸಿದ್ದ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಶ್ರೀ ಗುರುಬಸವ ಪಟ್ಟದ್ದೇವರು ಮಾತನಾಡಿ, ಕ್ರೀಡೆಯಲ್ಲಿ ಸೋಲು ಗೆಲ್ಲುವುದು ಮುಖ್ಯವಲ್ಲ. ಭಾಗವಹಿಸುವಿಕೆ ಮುಖ್ಯವಾಗಿರುತ್ತದೆ. ಎಲ್ಲ ಮಕ್ಕಳು ಕ್ರೀಡೆಯಲ್ಲಿ ಸಾಧನೆ ಮಾಡುವ ಹುಮ್ಮಸ್ಸಿನೊಂದಿಗೆ ಪಾಲ್ಗೊಳ್ಳಬೇಕು ಎಂದು ತಿಳಿಸಿದರು.

    ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಕ್ರೀಡಾಕೂಟ ಉದ್ಘಾಟಿಸಿದರು. ಪಬ್ಲಿಕ್ ಶಾಲೆಯ ಪ್ರಾಚಾರ್ಯ ಶ್ರೀಧರ ರಡ್ಡಿ ಪ್ರಾಸ್ತಾವಿಕ ಮಾತನಾಡಿದರು.

    ಅಲ್ಲಮ್‌ಪ್ರಭು ಬಿ.ಇಡಿ ಪ್ರಾಚಾರ್ಯೆ ಆಶಾ ಮುದ್ದಾಳೆ, ದೈಹಿಕ ನಿರ್ದೇಶಕ ಅನಿಲ ಪಾಟೀಲ್, ಮಾಂಟೆಸ್ಸರಿ ಪಬ್ಲಿಕ್ ಶಾಲೆಯ ಪ್ರಾಚಾರ್ಯೆ ಜಯಲಕ್ಷ್ಮೀ, ಪ್ರಾಥಮಿಕ ಶಾಲಾ ವಿಭಾಗದ ಮುಖ್ಯಗುರು ಮಹೇಶ ಕುಲಕರ್ಣಿ, ಸದಾನಂದ ಪವಾರ್, ಶಶಿಕುಮಾರ, ವೀರಶೆಟ್ಟಿ ಹೊಳಸಮುದ್ರೆ ಇತರರಿದ್ದರು.
    ಆಡಳಿತಾಧಿಕಾರಿ ಮೋಹನ ರಡ್ಡಿ ಸ್ವಾಗತಿಸಿದರು. ವಿದ್ಯಾರ್ಥಿನಿ ದೀಕ್ಷಾ, ಪಿಯುಷಾ ನಿರೂಪಣೆ ಮಾಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts