ಅರಮನೆಪಾಲೆ ಸಮಾಜದ ವಾರ್ಷಿಕ ಕ್ರೀಡಾಕೂಟ

blank

ನಾಪೋಕ್ಲು : ಕೊಡಗು ಮೂಲನಿವಾಸಿ ಅರಮನೆಪಾಲೆ ಸಮಾಜದ ಹತ್ತನೇ ವರ್ಷದ ವಾರ್ಷಿಕ ಕ್ರೀಡಾಕೂಟವನ್ನು ಮೂರ್ನಾಡು ವಿದ್ಯಾಸಂಸ್ಥೆ ಕ್ರೀಡಾಂಗಣದಲ್ಲಿ ನಡೆಸಲಾಯಿತು.
ಶಾಸಕ ಡಾ. ಮಂಥರ್‌ಗೌಡ ಕ್ರೀಡೆಗೆ ಚಾಲನೆ ನೀಡಿ ಮಾತನಾಡಿ, ಸಣ್ಣ ಸಮುದಾಯಗಳ ರಕ್ಷಣೆ ನಮ್ಮ ಆದ್ಯ ಕರ್ತವ್ಯವಾಗಿದೆ. ಕೊಡಗಿನ ಮೂಲನಿವಾಸಿ ಸಮುದಾಯವಾಗಿರುವ ಅರಮನೆಪಾಲೆ ಸಮುದಾಯ ಶಿಕ್ಷಣಕ್ಕೆ ಒತ್ತು ಕೊಡುವ ಮೂಲಕ ಸಮಗ್ರ ಅಭಿವೃದ್ಧಿಯನ್ನು ಕಂಡುಕೊಳ್ಳಬೇಕು. ಶಿಕ್ಷಣ ಅಭಿವೃದ್ಧಿ ಮೂಲವಾಗಿದೆ. ಕ್ರೀಡಾಕೂಟಗಳನ್ನು ಆಯೋಜಿಸುವ ಮೂಲಕ ಸಮುದಾಯ ಪರಸ್ಪರ ಒಗ್ಗಟ್ಟಿನಿಂದ ಮುನ್ನಡೆಯಬೇಕು ಎಂದು ಕರೆ ನೀಡಿದರು.
ಸಮುದಾಯದ ವ್ಯವಸ್ಥಿತ ಕ್ರೀಡಾಕೂಟ ಆಯೋಜನೆಯ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು. ಇದೇ ವೇಳೆ ಡಾ. ಮಂಥರ್‌ಗೌಡ ಅವರನ್ನು ಸನ್ಮಾನಿಸಲಾಯಿತು.
ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜನಿಕಂಡ ಸಿ. ಮಹೇಶ್ ನಾಚಯ್ಯ ಮಾತನಾಡಿ, ಅರಮನೆಪಾಲೆ ಸಮುದಾಯ ಬಾಂಧವರಿಗೆ ಅಕಾಡೆಮಿಯಿಂದ ಮೂಲ ಸಂಸ್ಕೃತಿ ಉಳಿಸುವ ನಿಟ್ಟಿನಲ್ಲಿ ಅಗತ್ಯ ಪರಿಕರ ಮತ್ತು ಕ್ರೀಡಾಕೂಟಕ್ಕಾಗಿ ಅನುದಾನ ಕೊಡಿಸುವುದಾಗಿ ಭರವಸೆ ನೀಡಿದರು.
ಕೊಡವ ಭಾಷಿಕ ಸಮುದಾಯಗಳ ಕೂಟದ ಅಧ್ಯಕ್ಷ ಡಾ.ಮೇಚಿರ ಸುಭಾಷ್ ನಾಣಯ್ಯ ಅರಮನೆಪಾಲೆ ಸಮುದಾಯ ಕೊಡಗಿನ 21 ಮೂಲನಿವಾಸಿ ಸಮುದಾಯಗಳಲ್ಲಿ ಒಂದಾಗಿದ್ದು, ಪ್ರತಿವರ್ಷ ಕ್ರೀಡಾಕೂಟ ಆಯೋಜಿಸುತ್ತಿರುವುದು ವಿಶೇಷವಾಗಿದೆ ಎಂದರು.
ಲೆಪ್ಟಿನೆಂಟ್ ಕರ್ನಲ್ ಮುಲ್ಲೇರ ಎಸ್. ಕಾವೇರಪ್ಪ ಕ್ರೀಡಾಕೂಟಕ್ಕೆ ಶುಭಾಶಯಗಳನ್ನು ಕೋರಿದರು. ಅರಮನೆ ಪಾಲೆಯರ ದೇವಯ್ಯ, ಸಮಾಜದ ಪ್ರಧಾನ ಸಂಘಟಕ ಹಾಗೂ ರಾಜೇಶ್ವರಿ ವಿದ್ಯಾಸಂಸ್ಥೆಯ ಪ್ರಾಂಶುಪಾಲ ಪಿ.ಕೆ. ಮಂದಣ್ಣ, ಅರಮನೆ ಪಾಲೆಯರ ಜಿ. ಚೆನಿಯ್ಯ, ಕೊಡಗು ಮೂಲನಿವಾಸಿ ಅರಮನೆ ಪಾಲೆ ಸಮಾಜ ವಹಿಸಿದ್ದರು.
ಪುಟ್ಬಾಲ್ ಪಂದ್ಯದಲ್ಲಿ ಪ್ರಥಮ ಸ್ಥಾನವನ್ನು ಕಂಡಿ ಮಕ್ಕಿ ತಂಡ, ದ್ವೀತಿಯ ಸ್ಥಾನವನ್ನು ಕಕ್ಕಬೆ, ಕುಂಜಿಲ ತಂಡ, ಕಬ್ಬಡಿ ಪಂದ್ಯದಲ್ಲಿ ಪ್ರಥಮ ಸ್ಥಾನವನ್ನು ಪೆರೂರು, ನಾಪೋಕ್ಲು ತಂಡ, ದ್ವೀತಿಯ ಸ್ಥಾನವನ್ನು ಮಾದಾಪುರ ತಂಡ, ಮಹಿಳೆಯರ ಥ್ರೋಬಾಲ್ ಪ್ರಥಮ ಸ್ಥಾನ ಕಂಡಿಮಕ್ಕಿ ತಂಡ, ದ್ವಿತೀಯ ಸ್ಥಾನ ಹಾಕತೂರು ತಂಡ, ಮಹಿಳೆಯರ ಹಗ್ಗಜಗ್ಗಾಟದಲ್ಲಿ ಪ್ರಥಮ ಸ್ಥಾನ ಚೆಯ್ಯಂಡಣ್ಣೆ ತಂಡ, ದ್ವಿತೀಯ ಸ್ಥಾನವನ್ನು ಪೆರೂರು, ನಾಪೋಕ್ಲು ತಂಡ ಪಡೆದುಕೊಂಡಿತು.

Share This Article

ನಿಮ್ಮ ಸ್ಮಾರ್ಟ್​ಫೋನ್​ ನಿಮ್ಮ ಫಿಟ್​ನೆಸ್​ ಕೋಚ್​… ಆಶ್ಚರ್ಯವಾಯಿತೇ? ಇಲ್ಲಿದೆ ಅಚ್ಚರಿ ಮಾಹಿತಿ… Smartphone

Smartphone : ಸ್ಮಾರ್ಟ್‌ಫೋನ್‌ಗಳ ಮೇಲಿನ ಅವಲಂಬನೆ ದಿನೇ ದಿನೇ ಹೆಚ್ಚಾಗುತ್ತಿದೆ. ಒಂದು ಅಧ್ಯಯನದ ಪ್ರಕಾರ, 2040ರ…

ಈ ದಿನಾಂಕಗಳಂದು ಜನಿಸಿದವರು ತಮ್ಮ ಬುದ್ಧಿವಂತಿಕೆಯಿಂದಾಗಿ ರಾಯಲ್​ ಲೈಫ್​ ನಡೆಸುತ್ತಾರೆ! Numerology

Numerology : ಜ್ಯೋತಿಷ್ಯದಲ್ಲಿ ಅನೇಕ ಬಗೆಗಳಿರುವುದು ಎಲ್ಲರಿಗೂ ತಿಳಿದಿದೆ. ಅವುಗಳಲ್ಲಿ ಸಂಖ್ಯಾಶಾಸ್ತ್ರ ಮತ್ತು ಹಸ್ತಸಾಮುದ್ರಿಕ ಶಾಸ್ತ್ರವೂ…

ನೀವು ಬೆಳಿಗ್ಗೆ ತಿಂಡಿಯನ್ನು ತಡವಾಗಿ ತಿನ್ನುತ್ತೀರಾ? ಎಚ್ಚರ..ಈ ಕಾಯಿಲೆ ಬರೋದು ಪಕ್ಕಾ… breakfast

breakfast: ಬೆಳಗಿನ ಉಪಾಹಾರವು ದೇಹಕ್ಕೆ ಬಹಳ ಮುಖ್ಯ. ಯಾವುದೇ ಕಾರಣಕ್ಕೂ ಉಪಹಾರವನ್ನು ಬಿಡಬಾರದು. ತಡವಾಗಿ ತಿನ್ನುವುದು…