Helicopter crash : ಗುಜರಾತ್ನ ಅಹಮದಾಬಾದ್ನಲ್ಲಿ ನಡೆದ ಭೀಕರ ವಿಮಾನ ಪತನ ಘಟನೆ ಮಾಸುವ ಮುನ್ನವೇ ಮತ್ತೊಂದು ದುರಂತ ನಡೆದಿದೆ. ಉತ್ತರಾಖಂಡದಲ್ಲಿ ಹೆಲಿಕಾಪ್ಟರ್ ಪತನಗೊಂಡು ಪೈಲಟ್ ಸೇರಿದಂತೆ 7 ಮಂದಿ ಸಾವಿಗೀಡಾಗಿದ್ದಾರೆ. ಹೆಲಿಕಾಪ್ಟರ್ ಡೆಹ್ರಾಡೂನ್ನಿಂದ ಕೇದಾರನಾಥಕ್ಕೆ ತೆರಳುವಾಗ ಈ ಅಪಘಾತ ಸಂಭವಿಸಿದೆ.
ಆರ್ಯನ್ ಏವಿಯೇಷನ್ಗೆ ಸೇರಿದ ಹೆಲಿಕಾಪ್ಟರ್, ಗುಪ್ತಕಾಶಿಯಿಂದ ಕೇದಾರನಾಥಕ್ಕೆ ಹೋಗುತ್ತಿದ್ದಾಗ ಭಾನುವಾರ ಬೆಳಗ್ಗೆ 5.20ಕ್ಕೆ ಅಪಘಾತ ಸಂಭವಿಸಿದೆ. ಗೌರಿಕುಂಡ್ ಅರಣ್ಯ ಪ್ರದೇಶದಲ್ಲಿ ಹೆಲಿಕಾಪ್ಟರ್ ಪತನವಾಗಿದೆ. ಈ ವೇಳೆ ಹೆಲಿಕಾಪ್ಟರ್‌ನಲ್ಲಿ ಪೈಲಟ್ ಸೇರಿ ಏಳು ಜನರಿದ್ದರು. ಅವರಲ್ಲಿ, ಆರು ಮಂದಿ ಭಕ್ತರೆಂದು ತಿಳಿದುಬಂದಿದೆ.
ಪ್ರಾಥಮಿಕ ತನಿಖಾ ವರದಿಯ ಪ್ರಕಾರ, ಪ್ರತಿಕೂಲ ಹವಾಮಾನದಿಂದಾಗಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳು ಸ್ಥಳಕ್ಕೆ ತಲುಪಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಮೃತರಲ್ಲಿ ಓರ್ವ ಬಾಲಕಿಯೂ ಸೇರಿದ್ದಾಳೆಂದು ವರದಿಯಾಗಿದೆ. ಮೃತರೆಲ್ಲರು ಉತ್ತರಾಖಂಡ, ಉತ್ತರ ಪ್ರದೇಶ, ಮಹಾರಾಷ್ಟ್ರ ಮತ್ತು ಗುಜರಾತ್ ನಿವಾಸಿಗಳು ಎಂದು ಗುರುತಿಸಲಾಗಿದೆ.
ಹೆಲಿಕಾಪ್ಟರ್‌ನಲ್ಲಿದ್ದ ಪ್ರಯಾಣಿಕರನ್ನು ರಾಜವೀರ್ (ಪೈಲಟ್), ವಿಕ್ರಮ್ ರಾವತ್, ವಿನೋದ್, ತೃಷ್ಟಿ ಸಿಂಗ್, ರಾಜ್‌ಕುಮಾ, ಶ್ರದ್ಧಾ ಹಾಗೂ ರಾಶಿ (10 ವರ್ಷ) ಎಂದು ಗುರುತಿಸಲಾಗಿದೆ.
Uttarakhand helicopter crash | Today, at around 5:20 am, a helicopter, which was going from Shri Kedarnath Dham to Guptkashi, has been reported to have crashed near Gaurikund. There were six passengers, including the pilot (5 adults and 1 child). The passengers in the helicopter… pic.twitter.com/AVGtuxWKGj
— ANI (@ANI) June 15, 2025
ಹೆಲಿಕಾಪ್ಟರ್ ಅಪಘಾತದ ಬಗ್ಗೆ ಪ್ರತಿಕ್ರಿಯಿಸಿರುವ ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ರುದ್ರಪ್ರಯಾಗ ಜಿಲ್ಲೆಯಲ್ಲಿ ಹೆಲಿಕಾಪ್ಟರ್ ಅಪಘಾತದ ಬಗ್ಗೆ ಮಾಹಿತಿ ಸಿಕ್ಕಿದೆ. ಇದು ತುಂಬಾ ದುಃಖಕರ. ಎಸ್‌ಡಿಆರ್‌ಎಫ್, ಸ್ಥಳೀಯ ಆಡಳಿತ ಮತ್ತು ಇತರ ರಕ್ಷಣಾ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿವೆ. ಎಲ್ಲ ಪ್ರಯಾಣಿಕರ ಸುರಕ್ಷತೆಗಾಗಿ ನಾನು ದೇವರನ್ನು ಪ್ರಾರ್ಥಿಸುತ್ತೇನೆ ಎಂದು ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.
जनपद रुद्रप्रयाग में हेलीकॉप्टर के दुर्घटनाग्रस्त होने का अत्यंत दुःखद समाचार प्राप्त हुआ है। एसडीआरएफ, स्थानीय प्रशासन एवं अन्य रेस्क्यू दल राहत एवं बचाव कार्यों में जुटे हैं।
बाबा केदार से सभी यात्रियों के सकुशल होने की कामना करता हूँ।
— Pushkar Singh Dhami (@pushkardhami) June 15, 2025
ಮೇ 2ರಂದು ಹಿಮಾಲಯದ ಕೇದಾರನಾಥ ದೇವಾಲಯದ ದ್ವಾರಗಳನ್ನು ತೆರೆದ ನಂತರ ಸಂಭವಿಸಿದ ಐದನೇ ಅಪಘಾತ ಇದಾಗಿದೆ. ಇದಕ್ಕೂ ಮೊದಲು, ಜೂನ್ 7 ರಂದು, ಕೇದಾರನಾಥಕ್ಕೆ ಹೋಗುತ್ತಿದ್ದ ಹೆಲಿಕಾಪ್ಟರ್ ಟೇಕ್ ಆಫ್ ಆಗುವ ಸಮಯದಲ್ಲಿ ತಾಂತ್ರಿಕ ದೋಷ ಉಂಟಾದ ಕಾರಣ ಉತ್ತರಾಖಂಡದ ಹೆದ್ದಾರಿಯಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್ ಮಾಡಬೇಕಾಯಿತು. ಈ ವೇಳೆ ಹೆಲಿಕಾಪ್ಟರ್ ಕಟ್ಟಡಗಳ ಹತ್ತಿರ ಅಪಾಯಕಾರಿಯಾಗಿ ಬಂದಿತು ಮತ್ತು ಅದರ ಟೈಲ್ ರೋಟರ್ ನಿಲ್ಲಿಸಿದ್ದ ಕಾರಿನ ಮೇಲೆ ಬಿದ್ದಿತು. ವಿಮಾನದಲ್ಲಿದ್ದ ಐದು ಯಾತ್ರಿಕರು ಸುರಕ್ಷಿತವಾಗಿ ಹೊರಬಂದರು, ಆದರೆ ಪೈಲಟ್‌ಗೆ ಸಣ್ಣಪುಟ್ಟ ಗಾಯಗಳಾದವು. (ಏಜೆನ್ಸೀಸ್)