More

    ಕಾವೇರಿ ಜಲವಿವಾದ; ಪ್ರತಿನಿತ್ಯ 5 ಸಾವಿರ ಕ್ಯೂಸೆಕ್​ ನೀರು ಹರಿಸುವಂತೆ CWMA ಸೂಚನೆ

    ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯಕ್ಕೆ ಮತ್ತೊಮ್ಮೆ ಹಿನ್ನಡೆಯಾಗಿದ್ದು, ಮುಂದಿನ 15 ದಿನಗಳ ಕಾಲ ಪ್ರತಿನಿತ್ಯ ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್​ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರ (CWMA) ಸೂಚಿಸಿದೆ.

    CWMA ಸಮಿತಿ ಅಧ್ಯಕ್ಷ ವಿನೀತ್​ ಗುಪ್ತಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ಹಾಗೂ ತಮಿಳುನಾಡು ಸರ್ಕಾರದ ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದರು. ಬುಧವಾರ ಅಥವಾ ಗುರುವಾರ ಸಭೆ ನಡೆಯಲಿದ್ದು, ಈ ಸಂಬಂಧ ಪ್ರಾಧಿಕಾರವು ಆದೇಶ ಹೊರಡಿಸಲಿದೆ ಎಂದು ಸಮಿತಿ ಅಧ್ಯಕ್ಷ ವಿನೀತ್​ ಗುಪ್ತಾ ತಿಳಿಸಿದ್ದಾರೆ.

    ರಾಜ್ಯದಲ್ಲಿ ಈಗಾಗಲೇ ಮಳೆ ಕೊರತೆಯಿಂದ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದೆ. ಕಾವೇರಿ ನದಿಗೆ ಕಟ್ಟಲಾಗಿರುವ ಕೆಆರ್‌ಎಸ್‌ ಜಲಾಶಯದಲ್ಲಿ ನೀರಿನ ಮಟ್ಟ 21ಸಾವಿರ ಟಿಎಂಸಿಗೆ ಇಳಿದಿದೆ. ಆದರೆ ಕಾವೇರಿ ನೀರು ನಿಯಂತ್ರಣಾ ಸಮಿತಿ ತಮಿಳುನಾಡಿಗೆ 15ದಿನಗಳ ಕಾಲ ಪ್ರತಿನಿತ್ಯ 5 ಸಾವಿರ ಕ್ಯೂಸೆಕ್ ನೀರನ್ನು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ ನೀಡಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts