More

    ಮತ್ತೊಂದು ಕರೊನಾ ಪ್ರಕರಣ ದೃಢ

    ಬೆಳಗಾವಿ: ಜಿಲ್ಲೆಯಲ್ಲಿ ಭಾನುವಾರ ಮತ್ತೊಂದು ಕರೊನಾ ಪ್ರಕರಣ ದೃಢವಾಗಿದ್ದು, ಸೋಂಕಿತರ ಸಂಖ್ಯೆ 298ಕ್ಕೆ ಏರಿಕೆಯಾಗಿದೆ. ಬೆಳಗಾವಿ ತಾಲೂಕಿನ ಉಚಗಾಂವ ಗ್ರಾಮದ 35 ವರ್ಷದ ಪುರುಷನಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ವ್ಯಕ್ತಿ ಮಹಾರಾಷ್ಟ್ರದಿಂದ ಆಗಮಿಸಿದ್ದರಿಂದ ಕ್ವಾರಂಟೈನ್‌ನಲ್ಲಿ ಇಡಲಾಗಿತ್ತು.

    264 ಶಂಕಿತರ ವರದಿ ಬಾಕಿ: ಕರೊನಾ ವೈರಸ್‌ಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ 264 ಶಂಕಿತರ ಗಂಟಲು ದ್ರವದ ಪರೀಕ್ಷಾ ವರದಿ ಬರುವುದು ಬಾಕಿ ಇದೆ. ಇಲ್ಲಿಯವರೆಗೆ 15,426 ಜನರ ಮೇಲೆ ನಿಗಾ ವಹಿಸಲಾಗಿದೆ. 1,560 ಜನರು 14 ದಿನ ಮನೆಯಲ್ಲಿ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. 80 ಜನರನ್ನು ಐಸೋಲೇಟೆಡ್ ವಾರ್ಡ್‌ನಲ್ಲಿ ಇರಿಸಲಾಗಿದೆ. 5,767 ಜನ 14 ದಿನಗಳ ಕ್ವಾರಂಟೈನ್ ಪೂರ್ಣಗೊಳಿಸಿದ್ದಾರೆ.

    8,019 ಜನ 28 ದಿನಗಳ ಕ್ವಾರಂಟೈನ್ ಪೂರ್ಣಗೊಳಿಸಿದ್ದಾರೆ. 14,130 ಜನರ ಗಂಟಲು ದ್ರವದ ಮಾದರಿಗಳನ್ನು ಸಂಗ್ರಹಿಸಲಾಗಿದೆ. 13,207 ಮಾದರಿಗಳು ನೆಗೆಟಿವ್ ಬಂದಿವೆ. 298 ವರದಿಗಳು ದೃಢಪಟ್ಟಿವೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts