ಮಂಗನ ಕಾಯಿಲೆಗೆ ಮತ್ತೊಂದು ಬಲಿ

Main-monkey-fever
Published on

ಸಿದ್ದಾಪುರ: ತಾಲೂಕಿನಲ್ಲಿ ಮಂಗನ ಕಾಯಿಲೆಗೆ ಎರಡನೇ ಬಲಿಯಾಗಿದೆ.
ಕೊರ್ಲಕ್ಯೆ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ 60ವರ್ಷದ ಮಹಿಳೆ ಭಾನುವಾರ ರಾತ್ರಿ ಶಿವಮೊಗ್ಗ ಮೆಗ್ಗಾನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ

ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ನಂತರ ಮೂರು ದಿನದ ಹಿಂದೆ ಪುನಃ ಮೆಗ್ಗಾನ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಳು.
ತಾಲೂಕಿನಲ್ಲಿ ಒಂದೇ ವಾರದಲ್ಲಿ ಇಬ್ಬರು ಮಂಗನ ಕಾಯಿಲೆಯಿಂದ ಸಾವನ್ನಪ್ಪಿದಮತಾಗಿದೆ.
ತಾಲೂಕಿನಲ್ಲಿ ಇಲ್ಲಿಯವರೆಗೆ 43 ಜನರಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಆತಂಕ: ನಾಲ್ಕೈದು ವರ್ಷಗಳ ಬಳಿಕ ಮತ್ತೆ ಮಂಗನ ಕಾಯಿಲೆ ಉಲ್ಬಣವಾಗಿದೆ. ಮಂಗಗಳಿಗೆ ಕಚ್ಚುವ ಉಣುಗು(ಉಣ್ಣೆ) ಗಳಿಂದ‌ ಕಾಯಿಲೆ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಕಾಡಂಚಿನ ಗ್ರಾಮಗಳಲ್ಲೇ ಹೆಚ್ಚು. ಕಾಯಿಲೆಗೆ ನಿರ್ದಿಷ್ಟ ಔಷಧವಿಲ್ಲ. ರೋಗ ಲಕ್ಷಣ ಆಧರಿಸಿ, ಜ್ವರ, ಕೆಮ್ಮಿಗೆ ಔಷಧ ನೀಡಬೇಕಿದೆ. ಕೆಲ ವರ್ಷಗಳಿಂದ ನೀಡುತ್ತಿದ್ದ ರೋಗ ನಿರೋಧಕ ಲಸಿಕೆಯನ್ನೂ ಸರ್ಕಾರ ಸ್ಥಗಿತ ಮಾಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net