ರಾಜ್ಯದಲ್ಲಿ ಮತ್ತೊಂದು ಗ್ಯಾಂಗ್​ರೇಪ್​: ಶಾಲೆಗೆ ಹೋಗುತ್ತಿದ್ದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ

rape pic new
Published on

ಮಂಗಳೂರು: ಮೈಸೂರಿನ ಚಾಮುಂಡೇಶ್ವರಿ ಬೆಟ್ಟದ ತಪ್ಪಲಲ್ಲಿ ನಡೆದ ಗ್ಯಾಂಗ್​ರೇಪ್​​ನ ನೆನಪು ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ಗ್ಯಾಂಗ್​ ರೇಪ್​ ಪ್ರಕರಣ ವರದಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಶಾಲೆಗೆ ಹೋಗುತ್ತಿದ್ದ 16 ವರ್ಷದ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿರುವ ಬಗ್ಗೆ ದೂರು ದಾಖಲಾಗಿದೆ.

ಶುಕ್ರವಾರ ಬೆಳಿಗ್ಗೆ 7 ಗಂಟೆಗೆ ಶಾಲೆಗೆ ನಡೆದುಕೊಂಡು ಹೋಗುತ್ತಿದ್ದ ಸಂತ್ರಸ್ತ ವಿದ್ಯಾರ್ಥಿನಿಯನ್ನು ಬಿಳಿಯ ಕಾರಿನಲ್ಲಿ ಬಂದ ಪರಿಚಿತ ಯುವಕ ಮತ್ತು ಇತರ ಅಪರಿಚಿತರು, ಆಕೆಯನ್ನು ಅಪಹರಿಸಿಕೊಂಡು ಹೋಗಿ ಈ ಹೇಯ ಕೃತ್ಯ ಎಸಗಿದ್ದಾರೆ. ಬಾಲಕಿಯು ಮಂಗಳೂರು ಲೇಡಿಘೋಷನ್ ಆಸ್ಪತ್ರೆಗೆ ಒಳರೋಗಿಯಾಗಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಸ್ಪತ್ರೆಯಿಂದ ಬಂದ ಮಾಹಿತಿಯ ಮೇರೆಗೆ ಬಾಲಕಿಯ ಹೇಳಿಕೆ ಪಡೆದಿರುವ ಬಂಟ್ವಾಳ ನಗರ ಪೊಲೀಸರು, ಐಪಿಸಿ ಸೆಕ್ಷನ್ 366(ಎ), 376(ಡಿ), 506 ರಡಿ ಮತ್ತು ಪೋಕ್ಸೊ ಕಾಯ್ದೆಯ ಸೆಕ್ಷನ್ 4, 6 ರಡಿ ಪ್ರಕರಣ ದಾಖಲಿಸಿದ್ದಾರೆ. ಒಟ್ಟು ಐದು ಜನ ಆರೋಪಿಗಳಿಂದ ಈ ಗ್ಯಾಂಗ್​ರೇಪ್​ ನಡೆದಿದೆ ಎನ್ನಲಾಗಿದ್ದು, ಪೊಲೀಸರು ಆರೋಪಿಗಳ ಪತ್ತೆ ಕಾರ್ಯ ಆರಂಭಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net