ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ‌ ಮತ್ತೊಂದು ಎಡವಟ್ಟು; ನಾಪತ್ತೆಯಾಗಿದ್ದ ಸೋಂಕಿತನ ಮೃತದೇಹ ಆಸ್ಪತ್ರೆ ಶವಾಗಾರದಲ್ಲೇ ಪತ್ತೆ!

ಚಾಮರಾಜನಗರ: ಆಮ್ಲಜನಕ ಕೊರತೆಯಿಂದ, ವೈದ್ಯಕೀಯ ಸೌಲಭ್ಯದ ಅವ್ಯವಸ್ಥೆಯಿಂದ ಸಾಲುಸಾಲು ಮರಣ ಸಂಭವಿಸಿರುವ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಮತ್ತೊಂದು ಎಡವಟ್ಟು ನಡೆದಿದೆ. ಇಲ್ಲಿಂದ ಸೋಂಕಿತನೊಬ್ಬ ನಾಪತ್ತೆಯಾಗಿದ್ದು, ಬಳಿಕ ಆಸ್ಪತ್ರೆಯ ಶವಾಗಾರದಲ್ಲೇ ಆತನ ಶವ ಪತ್ತೆಯಾಗಿದೆ! ಚಾಮರಾಜನಗರ ತಾಲೂಕು ಆಲ್ದೂರು ಗ್ರಾಮದ ಸುರೇಶ್ ಮೃತಪಟ್ಟಿರುವ ಸೋಂಕಿತ. ಕರೊನಾ ಸೋಂಕಿಗೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಸುರೇಶ್ ನಾಪತ್ತೆಯಾಗಿದ್ದರೂ, ಆಸ್ಪತ್ರೆಯವರು ಆತನ ಕುಟುಂಬಸ್ಥರಿಗೆ ಯಾವುದೇ ಮಾಹಿತಿ ನೀಡಿರಲಿಲ್ಲ. ತನ್ನ ಪತಿ ಕಾಣಿಸುತ್ತಿಲ್ಲ ಎಂದು ಸುರೇಶ್ ಪತ್ನಿ ಎಲ್ಲೆಡೆ ಹುಡುಕಾಡಿದ್ದಾರೆ. ಪತಿಯ ಬಗ್ಗೆ ಆಸ್ಪತ್ರೆಯಲ್ಲೂ ವಿಚಾರಿಸಿದ್ದಾರೆ. … Continue reading ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ‌ ಮತ್ತೊಂದು ಎಡವಟ್ಟು; ನಾಪತ್ತೆಯಾಗಿದ್ದ ಸೋಂಕಿತನ ಮೃತದೇಹ ಆಸ್ಪತ್ರೆ ಶವಾಗಾರದಲ್ಲೇ ಪತ್ತೆ!