More

    ತಪ್ಪು ಆದೇಶದ ಬಳಿಕ ಸರ್ಕಾರ ಮತ್ತೊಂದು ಎಡವಟ್ಟು; ದಸರಾಗೆ ‘ಹಳೇ ಕಾರ್ಯಸೂಚಿ’?

    ಬೆಂಗಳೂರು: ಮೊನ್ನೆಮೊನ್ನೆಯಷ್ಟೇ ಕನ್ನಡದಲ್ಲಿ ತಪ್ಪು ತಪ್ಪಾಗಿ ಆದೇಶ ಹೊರಡಿಸಿ ಸಾರ್ವಜನಿಕರಿಂದ ತೀವ್ರ ಟೀಕೆಗೆ ಒಳಗಾಗಿದ್ದ ರಾಜ್ಯ ಸರ್ಕಾರ ಇದೀಗ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದು, ಮತ್ತೆ ಸಾರ್ವಜನಿಕ ಟೀಕೆಗೆ ಒಳಗಾಗುವ ಲಕ್ಷಣಗಳು ಗೋಚರಿಸಿವೆ.

    ಈ ಕುರಿತು ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಗಮನ ಸೆಳೆದಿದ್ದಲ್ಲದೆ, ಇದೇ ಅವಕಾಶ ಬಳಸಿಕೊಂಡು ಸರ್ಕಾರದ ವಿರುದ್ಧ ಟೀಕೆಯನ್ನೂ ಮಾಡಿದ್ದಾರೆ. “ರಾಜ್ಯದ ಬಿಜೆಪಿ ಸರ್ಕಾರ 2021ರಲ್ಲಿಯೇ ಉಳಿದುಬಿಟ್ಟಿದೆ, ‘ಟೇಕ್ ಆಪ್’ ಆಗಿಯೇ ಇಲ್ಲ ಎನ್ನುವುದಕ್ಕೆ ಬೇರೆ ಸಾಕ್ಷಿ ಬೇಕೇ?” ಎಂದು ಅವರು ಪ್ರಶ್ನಿಸಿದ್ದಾರೆ.

    ಆಗಿದ್ದೇನು?: 2022ನೇ ವರ್ಷದ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಆಚರಣೆ ಕುರಿತು ಇಂದು ಸಿಎಂ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ಸಭೆ ನಡೆದಿದೆ. ಈ ಕುರಿತು ಕಾರ್ಯಸೂಚಿಯ ಕಿರುಪುಸ್ತಕದ ಮುಖಪುಟದಲ್ಲಿ ಇಸವಿಯನ್ನು ತಪ್ಪಾಗಿ ಬರೆಯಲಾಗಿದೆ. ಅಂದರೆ 2022ರ ಬದಲು 2021 ಎಂದು ನಮೂದಿಸಲಾಗಿದೆ. ಈ ಮೂಲಕ ಸರ್ಕಾರ ಹಳೆಯ ಕಾರ್ಯಸೂಚಿಯನ್ನೇ ಹೊಸದಾಗಿ ಮುದ್ರಿಸಿ ಎಡವಟ್ಟು ಮಾಡಿಕೊಂಡಿತೇ? ಎಂಬ ಅನುಮಾನ ಮೂಡುವಂತಿದೆ.

    ಕನ್ನಡ ತಪ್ಪಾಗಿ ಬರೆದು ಸರ್ಕಾರಿ ಆದೇಶ; ಸಂಬಂಧಿತರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ..

    ಮಗಳನ್ನು ಅಮೆರಿಕಕ್ಕೆ ಕಳಿಸಿ ಮರಳುತ್ತಿದ್ದ ದಂಪತಿ ಅಪಘಾತಕ್ಕೀಡಾಗಿ ಸ್ಥಳದಲ್ಲೇ ಸಾವು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts