

ನವದೆಹಲಿ: ಮೋಟಾರು ವಾಹನಗಳ (ತಿದ್ದುಪಡಿ) ಕಾಯ್ದೆ, 2019 ರ ನಿಬಂಧನೆಗಳನ್ನು ತಿದ್ದುಪಡಿ ಮಾಡಿರುವುದಾಗಿ ಸಾರಿಗೆ ಸಚಿವಾಲಯ ಘೋಷಿಸಿದೆ. ನವೀಕರಿಸಿದ ಮಾರ್ಗಸೂಚಿಗಳ ಪ್ರಕಾರ, ಓಲಾ ಮತ್ತು ಉಬರ್ನಂತಹ ಕ್ಯಾಬ್ ಗ್ರಾಹಕರಿಗೆ ಪೀಕ್ ಸಮಯದಲ್ಲಿ ಮೂಲ ದರಕ್ಕಿಂತ ಎರಡು ಪಟ್ಟು ಹೆಚ್ಚಿನ ಶುಲ್ಕ ವಿಧಿಸಲು ಕೇಂದ್ರವು ಅನುಮತಿ ನೀಡಿದೆ. ಇದು ಹಿಂದಿನ ಮಿತಿಗಿಂತ 1.5 ಪಟ್ಟು ಹೆಚ್ಚಾಗಿದೆ.
ಈವರೆಗೆ ಕ್ಯಾಬ್ ಅಗ್ರಿಗೇಟರ್ಗಳು ಪೀಕ್ ಅವರ್ಗಳಲ್ಲಿ ಸರ್ಜ್ ಬೆಲೆ ಮೂಲ ದರಕ್ಕಿಂತ 1.5 ಪಟ್ಟು ಹೆಚ್ಚು ವಿಧಿಸಲಾಗುತ್ತಿತ್ತು. ಆದರೀಗ ಹೊಸ ಮಾರ್ಗಸೂಚಿಯ ಪ್ರಕಾರ 2 ಪಟ್ಟು ಹೆಚ್ಚಿನ ದರ ವಿಧಿಸಬಹುದಾಗಿದೆ. ಅಲ್ಲದೇ ಮುಂದಿನ ಮೂರು ತಿಂಗಳ ಒಳಗೆ ಹೊಸ ಮಾರ್ಗಸೂಚಿಗಳನ್ನು ಜಾರಿಗೆ ತರಲು ರಾಜ್ಯಗಳಿಗೆ ಸೂಚಿಸಲಾಗಿದೆ.
ಓಲಾ, ಊಬರ್ ನಂತರ ಅಗ್ರಿಗೇಟರ್ ಕಂಪನಿಗಳು ಪೀಕ್ ಅವರ್ಗಳಲ್ಲಿ ಮೂಲ ಬೆಲೆಗಿಂತ ದುಪ್ಪಟ್ಟು ದರ ಅಂದರೆ ಸರ್ಜ್ ಚಾರ್ಜ್ ವಿಧಿಸಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ. ಈ ಸಂಬಂಧ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಜುಲೈ 1ರಂದು ಆದೇಶ ಹೊರಡಿಸಿದೆ. ಮೋಟಾರ್ ವೆಹಿಕಲ್ ಅಗ್ರಿಗೇಟರ್ ಮಾರ್ಗಸೂಚಿಗಳು 2025ರ ಅನ್ವಯ ಹೊಸ ಮಾರ್ಗಸೂಚಿಗಳನ್ನು ಜಾರಿಗೊಳಿಸಿದೆ.
ರಾಜ್ಯದಲ್ಲಿ ಬೈಕ್ ಟಾಕ್ಸಿ ನಿಷೇಧಗೊಳಿಸಿ ಸರ್ಕಾರ ಆದೇಶ ಹೊರಡಿಸಿದ ಬಳಿಕ ಇದೀಗ ಜನರಿಗೆ ಮತ್ತೊಂದು ಶಾಕ್ ಎದುರಾದಂತಾಗಿದೆ.
(ಏಜೆನ್ಸೀಸ್)
ಬೈಕ್ ಟ್ಯಾಕ್ಸಿ ಸೇವೆಗೆ ಕೇಂದ್ರ ಅಸ್ತು ಎಂದಿದ್ದು, ಇದಕ್ಕೆ ಆಯಾ ರಾಜ್ಯ ಸರ್ಕಾರಗಳ ಅನುಮತಿ ಕಡ್ಡಾಯ ಎಂದು ಹೇಳಿದೆ. ಬೈಕ್ ಟ್ಯಾಕ್ಸಿ ಸೇವೆಗೆ ಕರ್ನಾಟಕ ರಾಜ್ಯ ಸರ್ಕಾರ ನಿಷೇಧ ಹೇರಿದ್ದು, ಅದರ ವಿರುದ್ಧ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಕೇಂದ್ರ ಸಾರಿಗೆ ಸಚಿವಾಲಯ ಮೋಟಾರು ವಾಹನ ಕಾಯ್ದೆ 1988ರ ಅಡಿಯ ಮೋಟಾರ್ ವಾಹನಗಳ ಅಗ್ರಿಗೇಟರ್ ಮಾರ್ಗಸೂಚಿ 2025 ಬಿಡುಗಡೆ ಮಾಡಿದ್ದು, ರಾಜ್ಯ ಸರ್ಕಾರಗಳು ಖಾಸಗಿ ಬೈಕ್ಗಳನ್ನು ಪ್ರಯಾಣಿಕರ ಸಂಚಾರಕ್ಕೆ ಬಳಸಲು ಅಗ್ರಿಗೇಟರ್ಗಳಿಗೆ ಅನುಮತಿ ಕೊಡಬಹುದು ಎಂದು ಹೇಳಿದೆ.