More

    ಶಿಡ್ಲಘಟ್ಟದಲ್ಲಿ ಬಿಡುಗಡೆಯಾಯ್ತು ‘ಕಬ್ಜ’ ಚಿತ್ರದ ‘ಚುಮ್ ಚುಮ್ ಚಳಿ ಚಳಿ …’ ಹಾಡು

    ಶಿಡ್ಲಘಟ್ಟ: ‘ಕಬ್ಜ’ ಚಿತ್ರದ ಒಂದೊಂದು ಹಾಡು ಒಂದೊಂದು ಕಡೆ ಬಿಡುಗಡೆಯಾಗುತ್ತಿದೆ. ಮೊದಲ ಹೈದರಾಬಾದ್​ನಲ್ಲಿ ಬಿಡುಡೆಯಾದರೆ, ಎರಡನೆಯದನ್ನು ಚೆನ್ನೈನಲ್ಲಿ ಹೊರತರಲಾಯಿತು. ಈಗ ಮೂರನೆಯ ಹಾಡನ್ನು ಶಿಡ್ಲಘಟ್ಟದಲ್ಲಿ ನಡೆದ ದೊಡ್ಡ ಸಮಾರಂಭದಲ್ಲಿ ಸಾವಿರಾರು ಜನರ ಮಧ್ಯೆ ಬಿಡುಗಡೆ ಮಾಡಲಾಯಿತು.

    ‘ಚುಮ್ ಚುಮ್ ಚಳಿ ಚಳಿ . ತಬ್ಕೊ ಚಳುವಳಿ’ ಎಂದು ಸಾಗುವ ಈ ಮಾಸ್​ ಹಾಡನ್ನು ಪ್ರಮೋದ್​ ಮರವಂತೆ ಬರೆದರೆ, ಐರಾ ಉಡುಪಿ, ಮನೀಶ್ ದಿನಕರ್ ಹಾಗೂ ಸಂತೋಷ್ ವೆಂಕಿ ಹಾಡಿದ್ದಾರೆ. ರವಿ ಬಸ್ರೂರು ಸಂಗೀತ ನೀಡಿರುವ ಈ ಹಾಡನ್ನು, ಯೂಟ್ಯೂಬ್​ನ ಆನಂದ್​ ಆಡಿಯೋ ಚಾನಲ್​ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಹಾಡಿಗೆ ಉಪೇಂದ್ರ ಮತ್ತು ತಾನ್ಯಾ ಹೋಪ್​ ಹೆಜ್ಜೆ ಹಾಕಿದ್ದಾರೆ.

    ಇದನ್ನೂ ಓದಿ: ಸೌರವ್​ ಗಂಗೂಲಿ ಬಯೋಪಿಕ್​ನಲ್ಲಿ ರಣಬೀರ್​ ಕಪೂರ್​? ಏನಿದು ಹೊಸ ಸುದ್ದಿ?

    ಅಂದಹಾಗೆ, ಈ ಹಾಡು ಶಿವರಾಜಕುಮಾರ್​, ಗೀತಾ ಶಿವರಾಜಕುಮಾರ್​, ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ಶಿಡ್ಲಘಟ್ಟದ ಶಾಸಕರಾದ ಮುನಿಯಪ್ಪ, ಹೆಚ್.ಎಂ. ರೇವಣ್ಣ, ವಿತರಕ ಆನಂದ್ ಪಂಡಿತ್ ಸೇರಿದಂತೆ ಹಲವರ ಸಮ್ಮುಖದಲ್ಲಿ ಬಿಡುಗಡೆ ಮಾಡಲಾಯಿತು.

    ಈ ಸಂದರ್ಭದಲ್ಲಿ ಮಾತನಾಡಿದ ಆರೋಗ್ಯ ಸಚಿವ ಕೆ. ಸುಧಾಕರ್, ‘ಇದು ‘ಕಬ್ಜ’ ಸಿನಿಮಾದ ಹಬ್ಬ. ಈ ಹಾಡು ಬಿಡುಗಡೆ ಸಮಾರಂಭವನ್ನು ಚಂದ್ರು ಅವರಿಗೆ ನಮ್ಮ ಚಿಕ್ಕಬಳ್ಳಾಪುರದಲ್ಲಿ ಮಾಡೋಣ ಎಂದಿದ್ದೆ. ಆದರೆ, ಅವರು ತಮ್ಮ ತವರಲ್ಲಿ ಮಾಡಿದ್ದಾರೆ. ಈ ಮೊದಲು ನಾನು ‘ಆರ್ ಆರ್ ಆರ್’ ಚಿತ್ರದ ಆಡಿಯೋ ಲಾಂಚ್ ಮಾಡಿದ್ದೆ. ಅದು ಹಿಟ್ ಆಯ್ತು. ಅದಕ್ಕಿಂತ ದೊಡ್ಡ ಮಟ್ಟದಲ್ಲಿ ‘ಕಬ್ಜ’ ಗೆಲ್ಲಬೇಕು. ಇದೊಂದು ಸದಭಿರುಚಿಯ ಯುವಕರ ಸಿನಿಮಾ ಎನ್ನಬಹುದು. ಸಿನಿಮಾ ದೊಡ್ಡ ಮಟ್ಟದಲ್ಲಿ ಸೌಂಡ್ ಮಾಡಲಿ. ಇಂದು ಎಲ್ಲಾ ಕಡೆ ಕನ್ನಡ ಸಿನಿಮಾಗಳನ್ನು ಜನ ನೋಡಿ,‌ ಮೆಚ್ಚಿಕೊಳ್ಳುತ್ತಿದ್ದಾರೆ’ ಎಂದರು.

    ಇದನ್ನೂ ಓದಿ: ಬರೀ ರಾಮಾಚಾರಿ ಅಲ್ಲ, ‘ರಾಮಾಚಾರಿ 2.0’; ಇದು ತೇಜ್​ ಹೊಸ ಸಿನಿಮಾ

    ಈ ಸಮಾರಂಭದ ನಿಜವಾದ ಹೀರೋ ಎಂದರೆ ಅದು ಸಂಗೀತ ನಿರ್ದೇಶಕ ರವಿ ಬಸ್ರೂರು ಅಂತಲೇ ಮಾತು ಪ್ರಾರಂಭಿಸಿದ ಉಪೇಂದ್ರ, ‘ಈ ಚಿತ್ರದಲ್ಲಿ ಅವರು ಮಾಸ್, ಕ್ಲಾಸ್​ ಹಾಗೂ ಮೆಲೋಡಿ ಗೀತೆಗಳನ್ನು ಕೊಟ್ಟಿದ್ದಾರೆ. ಚಂದ್ರು ಈ ಸಿನಿಮಾ ಮೂಲಕ ಪ್ರತಿಯೊಬ್ಬರ ಹೃದಯ ‘ಕಬ್ಜ’ ಮಾಡಲಿದ್ದಾರೆ. ಚಿತ್ರದಲ್ಲಿ ತುಂಬಾ ಅದ್ಭುತಗಳಿದ್ದು, ಪ್ರೇಕ್ಷಕರಿಗೆ ನಿಜಕ್ಕೂ ಹಬ್ಬ . ಚಂದ್ರು ಕಥೆಯನ್ನು ಎಲ್ಲೂ ಬಿಟ್ಟು ಕೊಟ್ಟಿಲ್ಲ. ಕಥೆಯೇ ಚಿತ್ರದ ಹೈಲೈಟ್ ಎನ್ನಬಹುದು’ ಎಂದರು.

    ‘ಕಬ್ಜ’ ಚಿತ್ರವು ಮಾರ್ಚ್ 17ರಂದು ವಿಶ್ವದಾದ್ಯಂತ ಬಿಡುಗಡೆಯಾಗುತ್ತಿದೆ. ಈ ಚಿತ್ರದ ಮುಖ್ಯವಾದ ಪಾತ್ರವೊಂದರಲ್ಲಿ ಸುದೀಪ್ ಸಹ ಅಭಿನಯಿಸಿದ್ದು, ನಾಯಕಿಯಾಗಿ ಶ್ರೇಯಾ ಶರಣ್​ ನಟಿಸಿದ್ದಾರೆ.

    ಆಂಟಿ ಎಂಬುದು ಇಂದು ಅಶ್ಲೀಲ ಪದವಾಗಿದೆ: ಆಂಟಿ ಟ್ರೆಂಡ್​ಗೆ ನಟಿ ಕಸ್ತೂರಿ ಖಡಕ್​ ತಿರುಗೇಟು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts