ಬೆಸ್ಕಾಂ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಮತ್ತೋರ್ವ ಬಲಿ: ಐದು ಲಕ್ಷ ಪರಿಹಾರ ಘೋಷಿಸಿದ ಮೇಯರ್​

ಬೆಂಗಳೂರು: ಬೆಸ್ಕಾಂ ಸಿಬ್ಬಂದಿ ನಿರ್ಲಕ್ಷ್ಯದಿಂದಾಗಿ ವಿದ್ಯುತ್​ ಪ್ರವಹಿಸಿ ನಗರದಲ್ಲಿ ಮತ್ತೊಬ್ಬ ವ್ಯಕ್ತಿ ಮೃತಪಟ್ಟಿದ್ದಾನೆ. ಇದಕ್ಕೆ ಸಂಬಂಧಿಸಿದಂತೆ ಮೇಯರ್​ ಗಂಗಾಬಿಕೆ ಮೃತರ ಕುಟುಂಬಕ್ಕೆ ಐದು ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.

ದೊಡ್ಡಿಗುಂಟದ ನಿವಾಸಿ ಸತೀಶ್​ (35) ಮೃತ. ನಿನ್ನೆ ರಾತ್ರಿ ವಿದ್ಯುತ್ ಪರಿಶೀಲಿಸಲು ತೆರಳಿದ್ದಾಗ ಈ ಅವಘಡ ನಡೆದಿದ್ದು ವಿದ್ಯುತ್ ತಂತಿ ಸ್ಪರ್ಶಿಸಿದ್ದರಿಂದ ವ್ಯಕ್ತಿ ಮೃತಪಟ್ಟಿದ್ದಾರೆ. ಇದಕ್ಕೆ ಬೆಸ್ಕಾಂ ಸಿಬ್ಬಂದಿ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬದವರು ಆರೋಪಿಸಿದ್ದಾರೆ.

ಕೆಲದಿನಗಳ ಹಿಂದೆ ಮತ್ತಿಕೆರೆಯ ನೇತಾಜಿ ಸರ್ಕಲ್​ ಬಳಿ ವಿದ್ಯುತ್​ ತಂತಿ ಸ್ಪರ್ಶಿಸಿ ಲಿಖಿತ್​​ (14) ಎಂಬ ಬಾಲಕ ಮೃತಪಟ್ಟಿದ್ದ. ಈ ಘಟನೆ ನಡೆದು ಕೆಲದಿನಗಳಲ್ಲೇ ಮತ್ತೊಂದು ಘಟನೆ ನಡೆದಿರುವುದು ಜನರಲ್ಲಿ ಆತಂಕ ಮೂಡಿಸಿದ್ದು, ಬೆಸ್ಕಾಂ ಸಿಬ್ಬಂದಿ ನಿರ್ಲಕ್ಷ್ಯ ಎದ್ದು ತೋರುತ್ತಿದೆ. (ದಿಗ್ವಿಜಯನ್ಯೂಸ್​)

Leave a Reply

Your email address will not be published. Required fields are marked *