ಬಳ್ಳಾರಿಯಲ್ಲಿ ಮತ್ತೊಂದು ಬಾಣಂತಿ ಸಾವು.. ಕೂಡಲೇ ಪರಿಶೀಲನೆಗೆ ಸೂಚನೆ; CM Siddaramaiah

cm siddaramiah
Published on

ಬೆಂಗಳೂರು: ಬಳ್ಳಾರಿಯಲ್ಲಿ ಮತ್ತೊಂದು ಬಾಣಂತಿಯ ಸಾವಿಗಿರುವ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ(CM Siddaramaiah), ಈ ಬಗ್ಗೆ ಈಗಾಗಲೇ ಸಭೆ ನಡೆಸಿ ಡ್ರಗ್ಸ್ ಕಂಟ್ರೋಲರ್ ಅವರನ್ನು ಅಮಾನತು ಮಾಡಲಾಗಿದೆ.ಈ ಪ್ರಕರಣದಲ್ಲಿ ಸಾವು ಏಕೆ ಸಂಭವಿಸಿದೆ ಎಂದು ಕೂಡಲೇ ಪರಿಶೀಲಿಸಲಾಗುವುದು ಎಂದರು.

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ವಿಧಾನಸೌಧ ದ ಮುಂಭಾಗ ಇರುವ ಸಂವಿಧಾನಶಿಲ್ಪಿ ಭಾರತ ರತ್ನ ಮಹಾ ಮಾನವತಾವಾದಿ ಬಾಬಾ ಸಾಹೇಬ್ ಡಾ ll ಬಿ.ಆರ್.ಅಂಬೇಡ್ಕರ್ ರವರ 68ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಶುಕ್ರವಾರ ಮಾಧ್ಯಮ ದವರೊಂದಿಗೆ ಮಾತನಾಡಿದರು.

ದೇಶದಲ್ಲಿ ಬಸವಣ್ಣ, ಬುದ್ಧನ ನಂತರ ಸಮಾನತೆಗಾಗಿ ಹೋರಾಡಿದವರು ಬಾಬಾ ಸಾಹೇಬ್ ಅಂಬೇಡ್ಕರ್. ಅವರ ಪರಿನಿರ್ವಾಣ ದಿನದಂದು ಪುಷ್ಪಾರ್ಚನೆ ಮೂಲಕ ಅವರನ್ನು ಗೌರವಿಸುವ ಕೆಲಸವನ್ನು ಸರ್ಕಾರ ಮಾಡಿದೆ.

ಜಗತ್ತಿನಲ್ಲಿಯೇ ಶ್ರೇಷ್ಠ ಲಿಖಿತ ಸಂವಿಧಾನ

ಅವರು ತಮ್ಮ ಬದುಕನ್ನು ಸಾಮಾಜಿಕ ಹೋರಾಟದಲ್ಲಿ ಹಾಗೂ ಸಮಾಜದ ಪರಿವರ್ತನೆಗಾಗಿ ತೊಡಗಿಸಿಕೊಂಡರು. ಅಂಬೇಡ್ಕರ್ ಅವರು ಈ ದೇಶಕ್ಕೆ ಹಾಗೂ ನಮ್ಮ ಸಾಮಾಜಿಕ ಬದುಕಿಗೆ ಅಗತ್ಯವಾದಂತಹ ಸಂವಿಧಾನವನ್ನು ಕೊಟ್ಟಿದ್ದಾರೆ. ಜಗತ್ತಿನಲ್ಲಿಯೇ ಶ್ರೇಷ್ಠ ಲಿಖಿತ ಸಂವಿಧಾನವೆಂದು ನಮ್ಮ ಸಂವಿಧಾನ ಖ್ಯಾತಿ ಪಡೆದಿದೆ . ಸಂವಿಧಾನದ ಶ್ರೇಷ್ಠತೆ ತಿಳಿಯಬೇಕಾದರೆ ಒಳ್ಳೆಯವರ ಕೈಯಲ್ಲಿ ಅನುಷ್ಟಾನವಾಗಬೇಕು. ಕೆಟ್ಟವರ ಕೈಗೆ ಹೋದರೆ ಕೆಟ್ಟದಾಗುತ್ತದೆ ಎಂದು ಅಂಬೇಡ್ಕರ್ ಅವರು ಸ್ಪಷ್ಟವಾಗಿ ಈ ದೇಶದ ಜನರಿಗೆ ಎಚ್ಚರಿಕೆಯನ್ನು ಕೊಟ್ಟಿದ್ದರು ಎಂದರು.

ಸಮಸಮಾಜ ನಿರ್ಮಾಣಕ್ಕೆ ಶ್ರಮಿಸಿದ್ದರು

ಕೇವಲ ದಲಿತರಿಗೆ ಎಲ್ಲರಿಗೂ ಸಾಮಾಜಿಕ ಅವಕಾಶಗಳನ್ನು ದೊರಕಿಸಲು ಅವರು ಶ್ರಮಿಸಿದರು.ಅವಕಾಶ ವಂಚಿತರು, ಶೋಷಣೆ, ಅನ್ಯಾಯಕ್ಕೆ, ಅವಮಾನಕ್ಕೆ, ದೌರ್ಜನ್ಯಕ್ಕೆ ಒಳಪಟ್ಟ ಎಲ್ಲಾ ಜನರ ಪರವಾಗಿ ಕೆಲಸ ಅವರು ಮಾಡಿದ್ದರು. ಸಮಾಜದಲ್ಲಿ ಸಮಾನತೆ ಬಯಸಿ ಅದನ್ನೇ ನಿರ್ಮಿಸಲು ಬಹಳ ಸ್ಪಷ್ಟವಾಗಿ ಹೇಳಿದ್ದರು. ಸಂವಿಧಾನದ ಧ್ಯೇಯೋದ್ದೇಶಗಳೂ ಅದನ್ನೇ ಹೇಳುತ್ತದೆ. ಸಂವಿಧಾನದಿಂದ ಅನುಕೂಲ ಪಡೆದವರು ಅವರ ಸೋದರ ಜನಾಂಗಗಳಿಗೆ ಸಹಾಯ ಮಾಡಬೇಕು. ಎಲ್ಲರೂ ಸಂವಿಧಾನವನ್ನು ಅರ್ಥ ಮಾಡಿಕೊಳ್ಳಬೇಕೆಂದು ಬಯಸಿದ್ದರು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net