2ನೇ ಬಾರಿ ಆಸ್ಟ್ರೇಲಿಯಾ ಪ್ರಧಾನಿಯಾಗಿ ಆಂಥೋನಿ ಅಲ್ಬನೀಸ್ ಆಯ್ಕೆ; ಪ್ರಧಾನಿ ಮೋದಿ ಅಭಿನಂದನೆ| Modi

modi
Published on

Australia | ಆಸ್ಟ್ರೇಲಿಯಾದ ಪ್ರಧಾನಿಯಾಗಿ ಆಂಥೋನಿ ಅಲ್ಬನೀಸ್ ಅವರು ಪುನರ್​ ಆಯ್ಕೆಯಾಗಿದ್ದಾರೆ. ಇನ್ನೂ ಆಂಥೋನಿ ಅಲ್ಬನೀಸ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಆಸ್ಟ್ರೇಲಿಯಾ ಜೊತೆಗಿನ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ನಾನು ಎದುರು ನೋಡುತ್ತಿದ್ದೇನೆ ಎಂದು ಮೋದಿ ಹೇಳಿದ್ದಾರೆ.

ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರು, ಸತತ ಎರಡನೇ ಬಾರಿಗೆ ಮೂರು ವರ್ಷಗಳ ಪ್ರಧಾನ ಮಂತ್ರಿಯ ಅವಧಿಯನ್ನು ಗೆದ್ದ ಆಸ್ಟ್ರೇಲಿಯಾದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಆಸ್ಟ್ರೇಲಿಯಾದ ಬಲಪಂಥೀಯ ವಿರೋಧ ಪಕ್ಷದ ನಾಯಕ ಪೀಟರ್ ಡಟ್ಟನ್ ಕೂಡ ಚುನಾವಣೆಯಲ್ಲಿ ಸೋಲನ್ನು ಒಪ್ಪಿಕೊಂಡರು ಮತ್ತು ಆಂಥೋನಿ ಅಲ್ಬನೀಸ್ ಅವರ ಯಶಸ್ಸಿಗೆ ಅಭಿನಂದನೆ ಸಲ್ಲಿಸಿರುವುದಾಗಿ ಹೇಳಿದರು. ಈ ಪ್ರಚಾರದ ಸಮಯದಲ್ಲಿ ನಾವು ಸಾಕಷ್ಟು ಉತ್ತಮವಾಗಿ ಕಾರ್ಯನಿರ್ವಹಿಸಲಿಲ್ಲ,  ಅದು ಈಗ ಸ್ಪಷ್ಟವಾಗಿದೆ ಮತ್ತು ನಾನು ಅದರ ಸಂಪೂರ್ಣ ಜವಾಬ್ದಾರಿಯನ್ನು ಸ್ವೀಕರಿಸುತ್ತೇನೆ ಎಂದು ಡಟ್ಟನ್ ಹೇಳಿದರು.

ಪ್ರಧಾನಿ ಮೋದಿ ಹೇಳಿದ್ದೇನು?

ಆಸ್ಟ್ರೇಲಿಯಾದ ಪ್ರಧಾನಿಯಾಗಿ ಪುನರ್​ ಆಯ್ಕೆಯಾದ ಆಂಥೋನಿ ಅಲ್ಬನೀಸ್ ಅವರಿಗೆ ಅಭಿನಂದನೆಗಳು ಎಂದು ಪ್ರಧಾನಿ ಮೋದಿ ಸಾಮಾಜಿಕ ಮಾಧ್ಯಮ ವೇದಿಕೆ X ನಲ್ಲಿ ಬರೆದಿದ್ದಾರೆ. ಈ ಮಹಾನ್ ಗೆಲುವು ಆಸ್ಟ್ರೇಲಿಯಾದ ಜನರು ಇನ್ನೂ ನಿಮ್ಮ ನಾಯಕತ್ವದ ಸಾಮರ್ಥ್ಯಗಳಲ್ಲಿ ಸಂಪೂರ್ಣ ವಿಶ್ವಾಸ ಹೊಂದಿದ್ದಾರೆ ಎಂಬುದನ್ನು ತೋರಿಸುತ್ತದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಆಳವಾದ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಮತ್ತು ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯ ನಮ್ಮ ಹಂಚಿಕೆಯ ಗುರಿಯನ್ನು ಮುನ್ನಡೆಸಲು ಒಟ್ಟಾಗಿ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ ಎಂದು ಬರೆದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net