More

    ಸಿಎಎ ವಿರೋಧಿ ಪ್ರತಿಭಟನಾಕಾರರು ಪಾಕಿಸ್ತಾನದ ಭಾಷೆಯಲ್ಲೇ ಮಾತನಾಡುತ್ತಿದ್ದಾರೆ: ಸಿಎಂ ಯೋಗಿ ಆದಿತ್ಯನಾಥ್​

    ಗೋರಖ್​ಪುರ: ಸಿಎಎ ವಿರೋಧಿ ಪ್ರತಿಭಟನಾಕಾರರ ವಿರುದ್ಧ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ವಾಗ್ದಾಳಿ ನಡೆಸಿದ್ದಾರೆ.

    ದೇಶದ ಹಲವು ಕಡೆಗಳಲ್ಲಿ ಸಿಎಎ ವಿರೋಧಿ ಪ್ರತಿಭಟನೆಗಳು ನಡೆಸುತ್ತಿರುವವರು ಪಾಕಿಸ್ತಾನದಂತೆ ವರ್ತಿಸುತ್ತಿದ್ದಾರೆ. ನೇರವಾಗಿ ಅಥವಾ ಪರೋಕ್ಷವಾಗಿ ಪಾಕ್​ ಭಾಷೆಯನ್ನು ಮಾತನಾಡುತ್ತಿದ್ದಾರೆ. ಪ್ರತಿಭಟನೆಗಳ ಹೆಸರಿನಲ್ಲಿ ದೇಶಕ್ಕೆ ಮೋಸಮಾಡಲಾಗುತ್ತಿದೆ. ಇಂತಹ ಕೃತ್ಯಗಳನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಯೋಗಿ ಆದಿತ್ಯನಾಥ್​ ಅವರು ಗೋರಖ್​​ಪುರದ ನರ್ಸಿಂಗ್​ ಕಾಲೇಜಿನಲ್ಲಿ ನಡೆದ ಸಮಾರಂಭವೊಂದರಲ್ಲಿ ಹೇಳಿದ್ದಾರೆ.

    ಕೆಲವು ಸ್ವಯಂಘೋಷಿತ ಬುದ್ಧಿಜೀವಿಗಳು ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್​ಆರ್​ಸಿ ಬಗ್ಗೆ ಜನರಲ್ಲಿ ತಪ್ಪು ತಿಳಿವಳಿಕೆಗಳನ್ನು ಹುಟ್ಟುಹಾಕುತ್ತಿವೆ. ಹೀಗೆ ಪ್ರತಿಭಟನೆ ಮಾಡುತ್ತಿರುವ ಅನೇಕರಿಗೆ ತಾವ್ಯಾಕೆ ಪ್ರತಿಭಟನೆ ಮಾಡುತ್ತಿದ್ದೇವೆ ಎಂಬುದೇ ಗೊತ್ತಿಲ್ಲ. ಇಂಡಿಯಾ ಗೇಟ್​ ಬಳಿ ಕೆಲವು ಮಾಧ್ಯಮ ವರದಿಗಾರರು ಹೋಗಿ, ಪ್ರತಿಭಟನೆಗೆ ಕಾರಣವೇನು ಎಂದು ಪ್ರಶ್ನಿಸಿದಾಗ ಅವರಿಗೆ ಉತ್ತರ ಕೊಡಲೂ ಬರಲಿಲ್ಲ. ಸಿಎಎ ಎಂದರೆ ಏನು ಎಂಬುದೇ ಅವರಿಗೆ ಗೊತ್ತಿಲ್ಲ ಎಂದು ಹೇಳಿದರು.

    ಭಾರತದಲ್ಲಿ ಮುಸ್ಲಿಮರು ರಾಷ್ಟ್ರಪತಿ ಆಗುತ್ತಾರೆ. ಸುಪ್ರೀಂಕೋರ್ಟ್ ಜಡ್ಜ್​ ಕೂಡ ಆಗುತ್ತಾರೆ. ಆದರೆ ಪಾಕಿಸ್ತಾನದಲ್ಲಿರುವ ಹಿಂದು, ಸಿಖ್​, ಕ್ರಿಶ್ಚಿಯನ್​ ಅಲ್ಪಸಂಖ್ಯಾತರು ದೇಶದ ಯಾವುದೇ ಮೇಲ್ದರ್ಜೆಯ ಹುದ್ದೆಗಳಿಗೆ ಏರುವುದಿಲ್ಲ ಎಂದು ಹೇಳುವ ಮೂಲಕ ಭಾರತ ಹಾಗೂ ಪಾಕಿಸ್ತಾನಗಳು ತಮ್ಮಲ್ಲಿನ ಅಲ್ಪಸಂಖ್ಯಾತರನ್ನು ಹೇಗೆ ನಡೆಸಿಕೊಳ್ಳುತ್ತವೆ ಎಂಬುದನ್ನು ಹೋಲಿಕೆ ಮಾಡಿ ಹೇಳಿದರು. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts