More

    ಉಡುಪಿಯಲ್ಲಿ ಗೋಪೂಜೆಗೈದು ಗೋಹತ್ಯೆ ನಿಷೇಧ ಕಾನೂನು ಜಾರಿಗೊಳಿಸಿದ ಸಿಎಂ ಬಿಎಸ್‌ವೈ

    ಉಡುಪಿ: ರಾಜ್ಯಪಾಲರ ಅಂಗೀಕಾರದೊಂದಿಗೆ ಸೋಮವಾರ ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿಯಾಗಿದ್ದು, ಕರಂಬಳ್ಳಿಯ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗೋ ಪೂಜೆ ನೆರವೇರಿಸಿ ಚಾಲನೆ ನೀಡಿದರು.

    ದೇವಸ್ಥಾನದ ಧ್ವಜಸ್ತಂಭದ ಎದುರು ದೇಸಿ ತಳಿಯ ಲಕ್ಷ್ಮಿ ಮತ್ತು ಸುರಭಿಗೆ ಗೋ ಪೂಜೆ ನೆರವೇರಿಸುವ ಮೂಲಕ ಮುಖ್ಯಮಂತ್ರಿ ಕಾಯ್ದೆಯನ್ನು ಅಧಿಕೃತವಾಗಿ ಪ್ರಕಟಿಸಿದರು. ದನ ಮತ್ತು ಕರುವಿಗೆ ಹಣ್ಣು ಹಿಂಡಿ ಮತ್ತು ಹುಲ್ಲು ನೀಡಿ ಗೋಪೂಜೆ ನೆರವೇರಿಸಿದರು.

    ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮಹಾತ್ಮ ಗಾಂಧೀಜಿ ಅವರ ರಾಮರಾಜ್ಯ ಕನಸಿನ, ಗೋ ಹತ್ಯೆ ನಿಷೇಧ ಆಗಬೇಕೆಂಬ ಅಪೇಕ್ಷೆಯಂತೆ ಇಂದಿನಿಂದ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಜಾರಿಯಾಗಿದೆ. ಈ ಐತಿಹಾಸಿಕ ನಿರ್ಣಯಕ್ಕೆ ಎಲ್ಲರೂ ಸಹಕರಿಸಬೇಕು’ ಎಂದರು.

    ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ದೇವಸ್ಥಾನದ ಆಡಳಿತ ಮೊಕ್ತೇಸರ ಶಾಸಕ ಕೆ.ರಘುಪತಿ ಭಟ್, ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಕೋಟ ಶ್ರೀನಿವಾಸ ಪೂಜಾರಿ, ಸಂಸದೆ ಶೋಭಾ ಕರಂದ್ಲಾಜೆ ಸುಮಿತ್ರಾ ನಾಯಕ್, ರಾಘವೇಂದ್ರ ಕಿಣಿ, ಮಟ್ಟಾರು ರತ್ನಾಕರ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts