ವಿಜಯವಾಣಿ ಸುದ್ದಿಜಾಲ ಧಾರವಾಡ
ನಗರದ ಜೆಎಸ್‌ಎಸ್ ಕಾಲೇಜಿನಲ್ಲಿ ಬುಧವಾರ ಆಯೋಜಿಸಿದ್ದ ಮಾದಕ ವಸ್ತು ವಿರೋಧಿ ಜಾಗೃತಿ ಅಭಿಯಾನದಲ್ಲಿ ನಟ, ನಿರ್ದೇಶಕ ಉಪೇಂದ್ರ ಭಾಗವಹಿಸಿದ್ದರು.
ನೆಚ್ಚಿನ ನಟ ಆಗಮನದ ಸುದ್ದಿ ತಿಳಿದು ಸಾವಿರಾರು ವಿದ್ಯಾರ್ಥಿಗಳು ಜಮಾಯಿಸಿದ್ದರು. ನಟ ಉಪೇಂದ್ರ ಹುಬ್ಬಳ್ಳಿಯ ಕಾರ್ಯಕ್ರಮ ಮುಗಿಸಿ ಬರುವುದು ವಿಳಂಬವಾದ ಹಿನ್ನೆಲೆಯಲ್ಲಿ ಮನರಂಜನೆಗಾಗಿ ನಾ ಡ್ರೈವರ್ ಹಾಗೂ ಇತರ ಜಾನಪದ ಹಾಡುಗಳಿಗೆ ವಿದ್ಯಾರ್ಥಿಗಳು ಕುಣಿದರು.
ವಿದ್ಯಾರ್ಥಿ ಜೀವನದಲ್ಲಿ ಮಾದಕ ವಸ್ತುಗಳಿಗೆ ವ್ಯಸನರಾಗಿ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಉಪೇಂದ್ರ ಕಿವಿಮಾತು ಹೇಳಿದರು. ವಿದ್ಯಾರ್ಥಿಗಳು ಉಪೇಂದ್ರ ಜತೆ ಸೆಲಿ ತೆಗೆದುಕೊಂಡು ಸಂಭ್ರಮಿಸಿದರು.
ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಇಲಾಖೆ ನಡೆಸುತ್ತಿರುವ ಮಾದಕ ವಸ್ತು ವಿರೋಧಿ ಅಭಿಯಾನದಲ್ಲಿ ಇತ್ತೀಚೆಗೆ ನಟ ಡಾ ಶಿವರಾಜಕುಮಾರ್ ಭಾಗವಹಿಸಿದ್ದರು. ಇದೀಗ ನಟ ಉಪೇಂದ್ರ, ಈ ಅಭಿಯಾನಕ್ಕೆ ಕೈ ಜೋಡಿಸಿದರು.
ಜಿಲ್ಲಾಧಿಕಾರಿ ದಿವ್ಯ ಪ್ರಭು, ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಜೆಎಸ್‌ಎಸ್ ಕಾರ್ಯದರ್ಶಿ ಡಾ. ಅಜಿತ ಪ್ರಸಾದ್ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.
ಮಾದಕ ವಸ್ತು ವಿರೋಧಿ ಜಾಗೃತಿ ಅಭಿಯಾನ; ನಟ, ನಿರ್ದೇಶಕ ಉಪೇಂದ್ರ ಭಾಗಿ
You Might Also Like
ಕೇವಲ 10 ನಿಮಿಷದಲ್ಲಿ ಮನೆಯಲ್ಲೇ ಮಾಡಿ ಬ್ರೆಡ್ ಪಿಜ್ಜಾ; ಇಲ್ಲಿದೆ ಸಿಂಪಲ್ ವಿಧಾನ | Recipe
ಮನೆಯಲ್ಲಿದ್ದಾಗ ಕೆಲವೊಮ್ಮೆ ಬಹಳ ಹಸಿವಾಗುತ್ತಿರುತ್ತದೆ ಆದರೆ ಆ ಸಮಯದಲ್ಲಿ ಏನು ತಿನ್ನಬೇಕು ಎಂಬುದೆ ನಮಗೆ ತಿಳಿಯುವುದಿಲ್ಲ.…
ಊಟದ ಬಳಿಕ ಬೆಲ್ಲದ ಸೇವನೆಯಿಂದಾಗುವ ಪ್ರಯೋಜನ ಗೊತ್ತಾ?; ತಿಳಿದ್ರೆ ನೀವು ಮಿಸ್ ಮಾಡೋದೆ ಇಲ್ಲ | Health Tips
ಭಾರತದಲ್ಲಿ ಬೆಲ್ಲವನ್ನು ಸಾಮಾನ್ಯವಾಗಿ ಊಟದ ನಂತರ ತಿನ್ನಲಾಗುತ್ತದೆ. ನಿಮ್ಮ ಹಸಿವನ್ನು ನೀಗಿಸಲು ಇದನ್ನು ಸಿಹಿಯಾಗಿ ಸೇವಿಸಬಹುದು.…
ಟೊಮೆಟೊ ಸೇವನೆ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆಯೇ; ಈ ಬಗ್ಗೆ ತಜ್ಞರು ಹೇಳೋದೇನು? | Health Tips
ಕ್ಯಾನ್ಸರ್ ಚಿಕಿತ್ಸೆಯು ಇನ್ನೂ ಅತ್ಯಂತ ದುಬಾರಿ ಮತ್ತು ಅಸಾಧ್ಯವಾಗಿದೆ. ಇತ್ತೀಚೆಗೆ ಯುವಕರನ್ನೂ ಕಾಡುತ್ತಿರುವ ರೋಗ ಕ್ಯಾನ್ಸರ್.…