ಮದರಂಗಿಯಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆ

pdb (1)
Published on

ಪಡುಬಿದ್ರಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಕಾಪು ತಾಲೂಕು ಮುದರಂಗಡಿ ವಲಯದ ವತಿಯಿಂದ, ಮುದರಂಗಡಿ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲೆಯಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಜಿಲ್ಲಾ ಜನಜಾಗೃತಿ ವೇದಿಕೆ ನಿಕಟಪೂರ್ವ ಅಧ್ಯಕ್ಷ ನವೀನ ಅಮೀನ್ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ದುಷ್ಟಪರಿಣಾಮದ ಬಗ್ಗೆ ಮಾಹಿತಿ ನೀಡಿದರು. ಸರ್ಕಾರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲೆ ಅಮಿತಾ, ಪ್ರೌಢಶಾಲಾ ವಿಭಾಗದ ಮುಖ್ಯಶಿಕ್ಷಕಿ ಪುಷ್ಪಾವತಿ. ವಲಯ ಮೇಲ್ವಿಚಾರಕಿ ಪ್ರೇಮಾ, ಸೇವಾಪ್ರತಿನಿಧಿಗಳಾದ ಶಕುಂತಲಾ, ಶಶಿಕಲಾ ಹಾಗೂ ಶೌರ್ಯ ಟಕದ ಸದಸ್ಯ ಸುಧಾಕರ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net