More

    ರಾಜ್ಯ ಸರ್ಕಾರದಿಂದ ಜನ ವಿರೋಧಿ ಆಡಳಿತ

    ಚಿಕ್ಕಮಗಳೂರು: ರಾಜ್ಯದಲ್ಲಿ ಜನವಿರೋಧಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದು,ಅದನ್ನು ತೊಲಗಿಸ ಬೇಕು ಎಂದು ಜಿಲ್ಲಾ ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ನಗರದ ಪ್ರಮುಖ ರಸ್ತೆಯಲ್ಲಿ ಕಾರ್ಯಕರ್ತರು ಕಾಂಗ್ರೆಸ್ ಡೇಂಜರ್ ಎಂಬ ಪೋಸ್ಟರನ್ನು ಅಂಟಿಸುವ ಮೂಲಕ ಅಭಿಯಾನಕ್ಕೆ ಮಂಗಳವಾರ ಚಾಲನೆ ನೀಡಿದರು.
    ಬಿಜೆಪಿ ಕಚೇರಿಯಿಂದ ಕಾಲ್ನಡಿಗೆಯಲ್ಲಿ ತೆರಳಿದ ಕಾರ್ಯಕರ್ತರು ಆಜಾದ್‌ಪಾರ್ಕ್ ವೃತ್ತ ಹಾಗೂ ಎಂ.ಜಿ. ರಸ್ತೆ ಎರಡು ಬದಿಗಳಲ್ಲಿ ಪೋಸ್ಟರ್ ಅಂಟಿಸುವ ಮೂಲಕ ರಾಜ್ಯದಿಂದ ಕಾಂಗ್ರೆಸ್ ಸರ್ಕಾರ ತೊಲಗಬೇಕು ಎಂಬ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
    ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜ್ ಶೆಟ್ಟಿ ಮಾತನಾಡಿ, ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಜನತೆಗೆ ಅನ್ಯಾಯವೆಸಗುತ್ತಿರುವುದನ್ನು ಪೋಸ್ಟರ್ ಅಂಟಿಸುವ ಮೂಲಕ ಜನರಿಗೆ ತಿಳಿಸುವ ಕೆಲಸ ಮಾಡಲಾಗುತ್ತಿದೆ. ರಾಜ್ಯ ಸರ್ಕಾರ ಹಿಂದು ಹಾಗೂ ಜನವಿರೋಧಿ ಆಡಳಿತ ನಡೆಸುತ್ತಿದೆ ಎಂದು ಆರೋಪಿಸಿದರು.
    ರಾಮೇಶ್ವರಂ ಕೆಫೆ ಬಾಂಬ್ ಸ್ಟೋಟ, ನೇಹ ಹತ್ಯೆ ಪ್ರಕರಣ ಸೇರಿದಂತೆ ಹಿಂದುಗಳ ಮೇಲೆ ನಿರಂತರವಾಗಿ ಹಲ್ಲೆ ನಡೆಸಲಾಗುತ್ತಿದೆ. ದೇಶದಾದ್ಯಂತ ಕಾಂಗ್ರೆಸ್ ಧೂಳಿಪಟವಾದಂತೆ ರಾಜ್ಯದಲ್ಲಿಯೂ ಕಾಂಗ್ರೆಸ್ ಧೂಳಿಪಟ ಮಾಡಬೇಕು ಎಂದು ಹೇಳಿದರು.
    ಯುವಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಕೋಟ್ಯಾನ್ ಮಾತನಾಡಿ, ಎಂಟು ಮಂದಿ ಹಿಂದುಗಳ ಹತ್ಯೆಗೆ ಕಾರಣರಾಗಿರುವ ರಾಜ್ಯ ಸರ್ಕಾರ ಹಿಟ್ಲರ್ ಆಡಳಿತ ನೀಡುತ್ತಿದೆ. ಅಲ್ಪಸಂಖ್ಯಾತರನ್ನು ಒಲೈಸುವ ನಿಟ್ಟಿನಲ್ಲಿ ಹಿಂದುಗಳನ್ನು ಕಡೆಗಣಿಸಲಾಗುತ್ತಿದೆ. ನೇಹಾ ಹಿರೇಮಠ ಸಾವಿಗೆ ಕಾರಣವಾಗಿರುವ ಹಂತಕರನ್ನು ಬಂಧಿಸಬೇಕು. ವಿನಾಕಾರಣ ಹಿಂದು ಕಾರ್ಯಕರ್ತರ ಮೇಲೆ ಹೂಡಿರುವ ಪ್ರಕರಣ ಹಿಂಪಡೆದು ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿದರು.
    ಬಿಜೆಪಿ ರಾಜ್ಯ ಮಾಧ್ಯಮ ಸಮಿತಿ ಸದಸ್ಯ ಡಿ.ಟಿ.ವಿಜೇಂದ್ರ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಕೆ.ಎಸ್.ಪುಷ್ಪರಾಜ್, ಎಸ್ಸಿ ಘಟಕದ ಜಿಲ್ಲಾಧ್ಯಕ್ಷ ಕುರುವಂಗಿ ವೆಂಕಟೇಶ್, ಓಬಿಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಬಿ.ರಾಜಪ್ಪ, ಜಿಲ್ಲಾ ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ, ಮುಖಂಡರಾದ ಕೋಟೆ ರಂಗನಾಥ್, ಕೇಶವ, ಮುತ್ತಯ್ಯ, ಸೋಮಶೇಖರ್ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts