

ಕಡಬ: ಜೇಸಿಐ ಕಡಬ ಕದಂಬ, ಜೇಸಿಐ ಕಡಬ ಕದಂಬ ಚಾರಿಟೆಬಲ್ ಟ್ರಸ್ಟ್ ಹಾಗೂ ಪಶು ಸಂಗೋಪನಾ ಇಲಾಖೆಯ ಜಂಟಿ ಆಶ್ರಯದಲ್ಲಿ, ಕಡಬದ ಶ್ರೀ ಗಣೇಶ್ ಮೆಡಿಕಲ್ಸ್ ಸಹಯೋಗದೊಂದಿಗೆ ನಾಯಿಗಳಿಗೆ ರೇಬಿಸ್ ನಿರೋಧಕ ಲಸಿಕೆ ಶಿಬಿರ ಕಡಬ ಪರಿಸರದಲ್ಲ್ಲಿ ಭಾನುವಾರ ನಡೆಯಿತು.
ಕಡಬದ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನ ವಠಾರದಲ್ಲಿ ಜೇಸಿಐ ಭಾರತದ ಮಾಜಿ ವಲಯ ಉಪಾಧ್ಯಕ್ಷ, ಉದ್ಯಮಿ ಅಜಿತ್ ಶೆಟ್ಟಿ ಕಡಬ ಚಾಲನೆ ನೀಡಿದರು. ಕಡಬ ತಾಲೂಕು ಪಶು ವೈದ್ಯಕೀಯ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಅಜಿತ್ ಎಂ.ಸಿ. ಮಾತನಾಡಿದರು.
ಜೇಸಿಐ ಕಡಬ ಕದಂಬ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ನಾಗರಾಜ್ ಎನ್.ಕೆ. ಶುಭಹಾರೈಸಿದರು. ಜೇಸಿ ಘಟಕಾಧ್ಯಕ್ಷೆ ವಿಶ್ರುತಾ ರಾಜೇಶ್ ಅಧ್ಯಕ್ಷತೆ ವಹಿಸಿದರು. ಕಾರ್ಯಕ್ರಮ ನಿರ್ದೇಶಕ ಜೇಮ್ಸ್ ಕ್ರಿಶಲ್ ಡಿಸೋಜ ಉಪಸ್ಥಿತರಿದ್ದರು. ಜೇಸಿ ವಲಯಾಧಿಕಾರಿ ಕಾಶೀನಾಥ್ ಗೋಗಟೆ ಸ್ವಾಗತಿಸಿದರು. ಘಟಕದ ಕಾರ್ಯದರ್ಶಿ ನವ್ಯಾ ಕೃಷ್ಣ ವಂದಿಸಿದರು.