ನಾಲಂದದಲ್ಲಿ ರ‌್ಯಾಗಿಂಗ್ ವಿರೋಧಿ ಜಾಗೃತಿ

New Project (14)
Published on

ಪೆರ್ಲ: ನಾಲಂದ ಕಾಲೇಜು, ನಾಲಂದ ಚಾರಿಟೆಬಲ್ ಟ್ರಸ್ಟ್, ಕಾಲೇಜು ಎನ್ನೆಸ್ಸೆಸ್ ಘಟಕ ಮತ್ತು ಐಕ್ಯುಎಸಿ ಸಹಯೋಗದಲ್ಲಿ ರ‌್ಯಾಗಿಂಗ್ ವಿರೋಧಿ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಯಿತು.

ಬದಿಯಡ್ಕ ಪೊಲೀಸ್ ಠಾಣಾ ಜನಮೈತ್ರಿ ಬೀಟ್ ಪೊಲೀಸ್ ಅಧಿಕಾರಿ ಶೀನು ಎ.ವಿ. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ರ‌್ಯಾಗಿಂಗ್‌ನಿಂದ ವಿದ್ಯಾರ್ಥಿಗಳು ಎದುರಿಸುವ ತೊಂದರೆಗಳು ಮತ್ತು ಕಾನೂನು ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಿದರು.

ಪ್ರಾಂಶುಪಾಲ ಶಂಕರ ಖಂಡಿಗೆ ಅಧ್ಯಕ್ಷತೆ ವಹಿಸಿದ್ದರು. ಎನ್ನೆಸ್ಸೆಸ್ ಯೋಜನಾಧಿಕಾರಿ ವರ್ಷಿತ್ ಕೆ., ಐಕ್ಯುಎಸಿ ಸಂಯೋಜಕಿ ನಯನಾ ಮೊದಲಾದವರಿದ್ದರು. ಮಲಯಾಳಂ ವಿಭಾಗದ ಉಪನ್ಯಾಸಕಿ ವಿನೀಶಾ ಸ್ವಾಗತಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಅಶ್ವಿನಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net