More

  ನೈಋತ್ಯ ರೈಲ್ವೆಯಿಂದ ಭಯೋತ್ಪಾದನಾ ವಿರೋಧಿ ದಿನಾಚರಣೆ

  ಹುಬ್ಬಳ್ಳಿ : ಇಲ್ಲಿನ ಗದಗ ರಸ್ತೆಯಲ್ಲಿರುವ ನೈಋತ್ಯ ರೈಲ್ವೆ ಪ್ರಧಾನ ಕಚೇರಿಯಲ್ಲಿ ಭಯೋತ್ಪಾದನಾ ವಿರೋಧಿ ದಿನವನ್ನು ಮಂಗಳವಾರ ಆಚರಿಸಲಾಯಿತು.

  ‘ಶಾಂತಿ, ಸಾಮಾಜಿಕ ಸೌಹಾರ್ದತೆ ಮತ್ತು ಪರಸ್ಪರ ಅರಿವನ್ನು ಸಾಧಿಸಲು ಹಾಗೂ ಉತ್ತೇಜಿಸಲು ಮತ್ತು ಮಾನವ ಜೀವಕ್ಕೆ ಹಾಗೂ ಮೌಲ್ಯಗಳಿಗೆ ಬೆದರಿಕೆಯೊಡ್ಡುತ್ತಿರುವ ವಿಚ್ಛಿದ್ರಕಾರಿ ಶಕ್ತಿಗಳ ವಿರುದ್ಧ ಹೊರಾಡಲು ನಾವು ಪಣ ತೊಡುತ್ತೇವೆ’ ಎಂಬ ಪ್ರತಿಜ್ಞಾ ವಿದಿಯನ್ನು ನೈಋತ್ಯ ರೈಲ್ವೆ ವಲಯದ ಪ್ರಧಾನ ವ್ಯವಸ್ಥಾಪಕ ಅರವಿಂದ ಶ್ರೀವಾಸ್ತವ ಬೋಧಿಸಿದರು.

  ನೈಋತ್ಯ ರೖಲ್ವೆಯ ಹೆಚ್ಚುವರಿ ಪ್ರಧಾನ ವ್ಯವಸ್ಥಾಪಕ ಕೆ.ಎಸ್. ಜೈನ್ ಮತ್ತು ವಿವಿಧ ವಿಭಾಗದ ಹಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ್ದರು.

  ನೈಋತ್ಯ ರೈಲ್ವೆ ವ್ಯಾಪ್ತಿಯಲ್ಲಿ ಬರುವ 3 ವಿಭಾಗಗಳಾದ ಹುಬ್ಬಳ್ಳಿ, ಮೈಸೂರು ಮತ್ತು ಬೆಂಗಳೂರು ಕಚೇರಿ, ಕಾರ್ಯುಗಾರ ಮತ್ತು ಎಲ್ಲ ಶಾಖಾ ವಿಭಾಗಗಳಲ್ಲಿ ಭಯೋತ್ಪಾದನಾ ವಿರೋಧಿ ದಿನ ಆಚರಿಸಿ, ಪ್ರಮಾಣ ವಚನ ಸ್ವೀಕರಿಸಿದರು.

  ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ಪ್ರಚಾರ ಮಾಡುವಾಗ ಮಾಜಿ ಪ್ರಧಾನಿ ದಿ. ರಾಜೀವ ಗಾಂಧಿ ಭಯೋತ್ಪಾದಕರಿಂದ ಹತ್ಯೆಯಾದ ಪುಣ್ಯತಿಥಿಯ ನೆನಪಿಗಾಗಿ ಪ್ರತಿವರ್ಷ ಮೇ 21 ರಂದು ಭಯೋತ್ಪಾದನಾ ವಿರೋಧಿ ದಿನ ಆಚರಿಸಲಾಗುತ್ತದೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts