More

    ಭಯೋತ್ಪಾದನಾ ವಿರೋಧಿ ದಿನ; ಪ್ರಮಾಣ ವಚನ ಸ್ವೀಕಾರ

    ಮಡಿಕೇರಿ: ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಉಪಸ್ಥಿತಿಯಲ್ಲಿ ಮಂಗಳವಾರ ಭಯೋತ್ಪಾದನಾ ವಿರೋಧಿ ದಿನಾಚರಣೆ ಪ್ರಯುಕ್ತ ಪ್ರತಿಜ್ಞಾ ವಿಧಿ ಸ್ವೀಕರಿಸುವ ಕಾರ್ಯಕ್ರಮ ನಡೆಯಿತು.


    ಪ್ರತಿಜ್ಞಾ ವಿಧಿಯನ್ನು ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಬಿ.ಬಸಪ್ಪ ಅವರು ಬೋಧಿಸಿದರು. ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪುಟ್ಟರಾಜು, ಜಿಲ್ಲಾ ಖಜಾನಾಧಿಕಾರಿ ರಘುನಾಥ್, ಜಿಲ್ಲಾ ಸಾಂಖ್ಯಿಕ ಅಧಿಕಾರಿ ನಾರಾಯಣ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ನಾಗರಾಜು, ಸಾಮಾಜಿಕ ಭದ್ರತಾ ಯೋಜನೆಯ ಸಹಾಯಕ ನಿರ್ದೇಶಕರಾದ ಮಮತಾ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts