ಅನುಗ್ರಹ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

1 Min Read
anugraha
ಅನುಗ್ರಹ ಶಾಲಾ ಪ್ರಾರಂಬೋತ್ಸವ ಕಾರ್ಯಕ್ರಮ ನಡೆಯಿತು.

ಬೆಳ್ತಂಗಡಿ: ಅನುಗ್ರಹ ಶಾಲಾ ಪ್ರಾರಂಭೋತ್ಸವ ಶಾಲಾ ಸಭಾಭವನದಲ್ಲಿ ನಡೆಯಿತು. ಶಾಲೆಯ ವಿವಿಧ ತರಗತಿಗಳಿಗೆ ಸೇರ್ಪಡೆಗೊಂಡ ಹೊಸ ಮಕ್ಕಳನ್ನು ಹಾಗೂ ಹೊಸ ಶಿಕ್ಷಕರನ್ನು ಶಾಲಾ ಬ್ಯಾಂಡಿನ ಮೂಲಕ ಮೆರವಣಿಗೆಯಲ್ಲಿ ಕರೆತರಲಾಯಿತು.

ಶಾಲಾ ಸಂಚಾಲಕ ಅಬೆಲ್ ಲೋಬೊ, ಪ್ರಾಂಶುಪಾಲ ವಂ.ಫಾ ವಿಜಯ್ ಲೋಬೋ, ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷ ಆಂಟನಿ ಫೆರ್ನಾಂಡೀಸ್ ವಿದ್ಯಾರ್ಥಿಗಳ ಜತೆಯಲ್ಲಿ ಉದ್ಘಾಟಿಸುವ ಮೂಲಕ ಶಾಲಾ ಕಾರ್ಯ ಚಟುವಟಿಕೆಗಳಿಗೆ ಚಾಲನೆ ನೀಡಿದರು.

ಇದೇ ಸಂದರ್ಭ ನೂತನ ಸಂಚಾಲಕರಾಗಿ ಅಧಿಕಾರ ಸ್ವೀಕರಿಸಿದ ಅಬೆಲ್ ಲೋಬೊ ಅವರನ್ನು ಸ್ವಾಗತಿಸಲಾಯಿತು. ಹೊಸ ಶಿಕ್ಷಕ ಶಿಕ್ಷಕಿಯರನ್ನು ಹೂ ನೀಡಿ ಗೌರವಿಸಲಾಯಿತು. 2023-2024ನೇ ಸಾಲಿನ ಎಸ್ಸೆಸ್ಸೆಲ್ಸಿ ಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣಗೊಂಡ 27 ವಿದ್ಯಾರ್ಥಿಗಳನ್ನು ಸ್ಮರಣಿಕೆ ನೀಡಿ ಅಭಿನಂದಿಸಲಾಯಿತು.

ಅಬೆಲ್ ಲೋಬೊ ಅಧ್ಯಕ್ಷತೆ ವಹಿಸಿ ಶಾಲಾ ಕಾರ್ಯ ಚಟುವಟಿಕೆಗಳಿಗೆ ಶುಭಹಾರೈಸಿದರು. ವಿನಯಲತಾ ಕಾರ್ಯಕ್ರಮ ನಿರೂಪಿಸಿ, ರವಿಕುಮಾರ್ ವಂದಿಸಿದರು.

See also  ಪ್ರೀತಿಸಲು ನಿರಾಕರಣೆ; ಹುಬ್ಬಳ್ಳಿಯಲ್ಲಿ ನಡೆಯಿತು ನೇಹಾ ಮಾದರಿಯ ಮತ್ತೊಂದು ಹತ್ಯೆ
Share This Article