ಕರೊನಾದಿಂದ ಕೊನೆಯುಸಿರೆಳೆದ ಭಾರತದ ಪ್ರಥಮ ಮಹಿಳಾ ಹಾಕಿ ತೀರ್ಪುಗಾರ್ತಿ ಪುಚ್ಚಿಮಂಡ ಅನುಪಮಾ

Anupama
Published on

ಕೊಡಗು: ಭಾರತದ ಪ್ರಥಮ ಮಹಿಳಾ ಹಾಕಿ ತೀರ್ಪುಗಾರ್ತಿ ಪುಚ್ಚಿಮಂಡ ಅನುಪಮಾ ಅವರು ಭಾನುವಾರ ಕರೊನಾ ಸೋಂಕಿನಿಂದ ನಿಧರಾಗಿದ್ದಾರೆ.

ಕೊಡಗು ಜಿಲ್ಲೆ ನಾಪೋಕ್ಲು ಬೇತು ಗ್ರಾಮದ ನಿವಾಸಿಯಾಗಿದ್ದ ಪುಚ್ಚಿಮಂಡ ಅನುಪಮಾ ಬೆಂಗಳೂರಿನಲ್ಲಿ ನೆಲೆಸಿದ್ದರು. ಒಂದು ವಾರದಿಂದ ಅನಾರೋಗ್ಯಕ್ಕೀಡಾಗಿದ್ದ ಅವರಿಗೆ ಕೊರೊನಾ ಪಾಸಿಟಿವ್​ ಆಗಿತ್ತು.

ಈ ಹಿನ್ನೆಲೆಯಲ್ಲಿ ಶಾಂತಿ ನಗರ ಖಾಸಗಿ ಆಸ್ಪತ್ರೆಯಲ್ಲಿ ಅನುಪಮಾ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಬೆಳಗ್ಗೆ 9.30ಕ್ಕೆ‌ ಮೃತಪಟ್ಟಿದ್ದಾರೆ.

ಅನುಪಮಾ ಅವರು ನೂರು ಅಂತಾರಾಷ್ಟ್ರೀಯ ಹಾಕಿ ಪಂದ್ಯದ ತೀರ್ಪುಗಾರಿಕೆ ಮಾಡಿದ್ದರು. ಅನುಪಮಾ ಸಾವಿಗೆ ಅವರು ಬಂಧು-ಬಳಗ ಹಾಗೂ ಸ್ನೇಹಿತರು ಕಂಬನಿ ಮಿಡಿದಿದ್ದಾರೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net