

ಬೈಂದೂರು: ಕೆಂಚನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ತಲ್ಲೂರು ನಾರಾಯಣ ವಿಶೇಷ ಮಕ್ಕಳ ಶಾಲೆಯ ವಿದ್ಯಾರ್ಥಿ ಅನುರಾಗ್ ನಾಯಕ್ ಹಿರಿಯರ ವಿಭಾಗದಲ್ಲಿ ಧಾರ್ಮಿಕ ಪಠಣದಲ್ಲಿ ಪ್ರಥಮ ಹಾಗೂ ಭಾವಗೀತೆಯಲ್ಲಿ ಪ್ರಥಮಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.