3 ವರ್ಷಗಳ ಬ್ರೇಕ್​ ನಂತರ ಮತ್ತೊಮ್ಮೆ ತೆರೆಯ ಮೇಲೆ ನಟಿ ಅನುಷ್ಕಾ ಶೆಟ್ಟಿ; 'ಮಿಸ್ ಶೆಟ್ಟಿ ಮಿಸ್ಟರ್ ಪೋಲಿಶೆಟ್ಟಿ' ರಿಲೀಸ್​ ಡೇಟ್​​ನಲ್ಲಿ ಬದಲಾವಣೆ?

Untitled design - 2023-07-26T134208.497
Published on

ಆಂಧ್ರಪ್ರದೇಶ: ಮೂರು ವರ್ಷಗಳ ದೊಡ್ಡ ವಿರಾಮದ ನಂತರ ಇದೀಗ ಮತ್ತೊಮ್ಮೆ ಚಿತ್ರರಂಗಕ್ಕೆ ಹಿಂದಿರುಗುತ್ತಿರುವ ಟಾಲಿವುಡ್​ ಬೆಡಗಿ ನಟಿ ಅನುಷ್ಕಾ ಶೆಟ್ಟಿ, 'ಮಿಸ್ ಶೆಟ್ಟಿ ಮಿಸ್ಟರ್ ಪೋಲಿಶೆಟ್ಟಿ' ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸದ್ಯ ಈ ಚಿತ್ರದ ಬಗ್ಗೆ ಹೊಸ ಮಾಹಿತಿ ಲಭಿಸಿದ್ದು, ಸಿನಿಮಾ ನಿರೀಕ್ಷಿಸಿದ ದಿನಾಂಕದಂದು ಬಿಡುಗಡೆಗೊಳ್ಳುವುದು ಅನುಮಾನ ಎಂದು ಹೇಳಲಾಗಿದೆ.

ಮಹೇಶ್ ಬಾಬು ನಿರ್ದೇಶನದ ಈ ಚಿತ್ರವು ಕಾಮಿಡಿ-ರೋಮ್ಯಾಂಟಿಕ್​ ಜಾನರ್​ ಆಗಿದ್ದು, ನವೀನ್ ಪೋಲಿಶೆಟ್ಟಿಗೆ ಜೋಡಿಯಾಗಿ ಅನುಷ್ಕಾ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ಸದ್ಯದ ವರದಿ ಅನುಸಾರ, ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ವಿಳಂಬವಾದ ಕಾರಣ ಸಿನಿಮಾದ ಬಿಡುಗಡೆ ದಿನಾಂಕವನ್ನು ಮುಂಚಿತವಾಗಿ ತಿಳಿಸಿದಂತೆ ಆಗಸ್ಟ್ 4, 2023 ರಂದು ರಿಲೀಸ್​ ಮಾಡಲು ಸಾಧ್ಯವಿಲ್ಲ ಎಂದು ಹೇಳಲಾಗಿದೆ. ಈ ಬಗ್ಗೆ ಚಿತ್ರತಂಡ ಅಧಿಕೃತ ಮಾಹಿತಿಯನ್ನು ಪ್ರಕಟಿಸುವವರೆಗೂ ಕಾಯಬೇಕಿದೆ.

ನವೀನ್ ಪೋಲಿಶೆಟ್ಟಿ ಮತ್ತು ಅನುಷ್ಕಾ ಶೆಟ್ಟಿ ಅಭಿನಯದ 'ಮಿಸ್ ಶೆಟ್ಟಿ ಮಿಸ್ಟರ್ ಪೋಲಿಶೆಟ್ಟಿ' ಚಿತ್ರದಲ್ಲಿ ಮುರಳಿ ಶರ್ಮಾ, ಜಯಸುಧಾ, ತುಳಸಿ ಸೇರಿದಂತೆ ಮುಂತಾದ ಕಲಾವಿದರು ನಟಿಸಿದ್ದಾರೆ. ಯುವಿ ಕ್ರಿಯೇಷನ್ಸ್ ನಿರ್ಮಿಸುತ್ತಿರುವ ಈ ಚಿತ್ರವನ್ನು ತೆಲುಗು, ತಮಿಳು, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಗೊಳಿಸಲು ಚಿತ್ರತಂಡ ನಿರ್ಧರಿಸಿದೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net