More

    ಅಂಗಲ್ಲು ಹಿಂಸಾಚಾರ ಪ್ರಕರಣ; ಮಾಜಿ ಸಿಎಂ ಚಂದ್ರಬಾಬು ನಾಯ್ಡುಗೆ ಜಾಮೀನು

    ಅಮರಾವತಿ: ಆಂದ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಅಂಗಲ್ಲು ಎಂಬಲ್ಲಿ ಸಂಭವಿಸಿದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡುಗೆ ಆಂಧ್ರಪ್ರದೇಶ ಹೈಕೋರ್ಟ್​ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

    ಅನ್ನಮಯ್ಯ ಜಿಲ್ಲೆಯ ಅಂಗಲ್ಲು ಗ್ರಾಮದಲ್ಲಿ ಆಗಸ್ಟ್​ 4ರಂದು ಸಂಭವಿಸಿದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮುಡಿವೇಡು ಪೊಲೀಸರು ಚಂದ್ರಬಾಬು ನಾಯ್ಡು ಸೇರಿದಂತೆ ಹಲವು ಟಿಡಿಪಿ ಮುಖಂಡರ ವಿರುದ್ಧ ಪ್ರಕರಣ ದಾಖಲಿಸಿ ವಶಕ್ಕೆ ಪಡೆದಿದ್ದರು.

    ಇದನ್ನೂ ಓದಿ: ಚೀನಾ; ಇಸ್ರೇಲ್​ ರಾಜತಾಂತ್ರಿಕ ಅಧಿಕಾರಿಗೆ ಚೂರಿ ಇರಿತ

    ಚಂದ್ರಬಾಬು ನಾಯ್ಡು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ವಾದ-ಪ್ರತಿವಾದವನ್ನು ಸುದೀರ್ಘವಾಗಿ ಆಲಿಸಿದ ಬಳಿಕ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ನಾಯ್ಡು ವಿರುದ್ಧ ಇನ್ನರ್ ರಿಂಗ್ ರೋಡ್ ಮತ್ತು ಫೈಬರ್ ನೆಟ್‌ಗೆ ಸಂಬಂಧಿಸಿದಂತೆ ದಾಖಲಾಗಿರುವ ಭ್ರಷ್ಟಾಚಾರ ಪ್ರಕರಣಗಳು ಬಾಕಿ ಉಳಿದಿರುವುದರಿಂದ ಬೇಲ್​ ಸಿಕ್ಕರೂ ಬಿಡುಗಡೆ ಭಾಗ್ಯ ಇಲ್ಲದಂತಾಗಿದೆ.

    ಪ್ರಕರಣದ ಹಿನ್ನಲೆ

    ರಾಜ್ಯದಲ್ಲಿ ಬಾಕಿ ಉಳಿದಿರುವ ನೀರಾವರಿ ಯೋಜನೆಗಳನ್ನು ತ್ವರಿತಗತಿಯಲ್ಲಿ ಜಾರಿ ಮಾಡಬೇಕು ಎಂದು ಆಗ್ರಹಿಸಿ ಚಂದ್ರಬಾಬು ನಾಯ್ಡು ರಾಜ್ಯಾದ್ಯಂತ ಪ್ರವಾಸ ನಡೆಸಿದ್ದರು. ರ‍್ಯಾಲಿ ಅನ್ನಮಯ್ಯ ಜಿಲ್ಲೆಯ ಅಂಗಲ್ಲು ಗ್ರಾಮ ತಲುಪಿದ ವೇಳೆ ವೈಎಸ್​ಆರ್​ಸಿಪಿ ಹಾಗೂ ಟಿಡಿಪಿ ಕಾರ್ಯಕರ್ತರ ನಡುವೆ ಘರ್ಷಣೆ ಉಂಟಾಗಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts