20.4 C
Bengaluru
Sunday, January 19, 2020

ಹೆದ್ದಾರಿ 4ರ ಜಾಸ್ ಟೋಲ್ ಬಳಿ ಲಾರಿ-ಬಸ್ ಡಿಕ್ಕಿಯಾಗಿ 16 ಮಂದಿಗೆ ಗಾಯ

Latest News

ತುಂಗಭದ್ರಾ ನದಿಯಲ್ಲಿ ದಂಪತಿ ಶವ ಪತ್ತೆ

ಗುತ್ತಲ: ದಂಪತಿ ಶವಗಳು ಸಮೀಪದ ಹಾವೇರಿ- ಬಳ್ಳಾರಿ ಜಿಲ್ಲೆಗಳ ಸಂಪರ್ಕ ಸೇತುವೆ ಕಳೆಗೆ ತುಂಗಭದ್ರಾ ನದಿಯಲ್ಲಿ ಶನಿವಾರ ಬೆಳಗ್ಗೆ ಪತ್ತೆಯಾಗಿವೆ.

ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿ

ಹಾನಗಲ್ಲ: ನೌಕರರು ಸರ್ಕಾರಕ್ಕೆ ಬೇಡಿಕೆ ಇಡುವ ಜತೆಗೆ ಅಭಿವೃದ್ಧಿ ಕಾರ್ಯಗಳಿಗೂ ಪ್ರಾಮಾಣಿಕವಾಗಿ ಸಹಕರಿಸಬೇಕು. ಸರ್ಕಾರ-ನೌಕರರ ಸಂಘಟನೆ ಒಂದಾಗಿ ಶ್ರಮಿಸಬೇಕು ಎಂದು ಸರ್ಕಾರಿ ನೌಕರರ...

ಸಂಸ್ಕೃತಿ, ಪರಂಪರೆ ಬೆಳೆಸಲು ಹೋರಾಟ ಅಗತ್ಯ

ರಾಣೆಬೆನ್ನೂರ: ಧರ್ಮ-ಅಧರ್ಮ, ಪರಕೀಯರ ಆಕ್ರಮಣದಿಂದ ಹಾಗೂ ಜಾತಿ, ಭೇದ-ಭಾವ ಹೋಗಲಾಡಿಸುವುದು ಸೇರಿ ಪ್ರತಿ ಹೋರಾಟದಲ್ಲೂ ಕರ್ನಾಟಕದ ಪಾತ್ರ ಬಹುಮುಖ್ಯವಾಗಿದೆ ಎಂದು ರಾಷ್ಟ್ರೀಯ ಸ್ವಯಂ...

ಅಂಗವಿಕಲರಿಗೆ ಪ್ರಥಮ ಆದ್ಯತೆ ನೀಡಿ

ಹಾವೇರಿ: ಅಂಗವಿಕಲರಿಗೆ ಎಲ್ಲ ಯೋಜನೆಗಳಲ್ಲಿ ಪ್ರಥಮ ಆದ್ಯತೆ ನೀಡುವ ಮೂಲಕ ಅವರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡಬೇಕು ಎಂದು ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ಆಯುಕ್ತ...

ಆಯುಷ್ಮಾನ್ ಭಾರತಕ್ಕೆ ಅನಾರೋಗ್ಯ

ಶಂಕರ ಶರ್ಮಾ ಕುಮಟಾ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿನ ಆಯುಷ್ಮಾನ್ ಭಾರತ ಆರೋಗ್ಯ ಸೇವಾ ಕೇಂದ್ರವು ತಾಂತ್ರಿಕ ಸಮಸ್ಯೆಯಿಂದ ಬಳಲುತ್ತಿದ್ದು,...

ನೆಲಮಂಗಲ: ತುಮಕೂರು-ಬೆಂಗಳೂರು ಮಾರ್ಗದ ರಾಷ್ಟ್ರೀಯ ಹೆದ್ದಾರಿ 4ರ ಜಾಸ್ ಟೋಲ್ ಬಳಿ ಗುರುವಾರ ರಾಜ್ಯ ಸಾರಿಗೆ ಬಸ್ ಮತ್ತು ಲಾರಿ ನಡುವೆ ಸಂಭವಿಸಿರುವ ಅಪಘಾತದಲ್ಲಿ ಚಾಲಕ ಸೇರಿ 16 ಮಂದಿ ಗಾಯಗೊಂಡಿದ್ದಾರೆ.

ಬಸ್ ಚಾಲಕ ಲಿಂಗಪ್ಪ(47), ಬೆಂಗಳೂರು ತಿಗಳರಪಾಳ್ಯ ನಿವಾಸಿ ಮೊಹಮ್ಮದ್ ಮುಸಲುದ್ದೀನ್ (26), ಮೊಹಮ್ಮದ್ ತಾಜೂದ್ದೀನ್ (58), ಪೀಣ್ಯ 2ನೇ ಹಂತದ ನಿವಾಸಿ ನಾರಾಯಣಪ್ಪ (65), ವಿಜಯಲಕ್ಷ್ಮೀ(27), ಕುಂಬಳಗೋಡು ನಿವಾಸಿ ಯಶವಂತ್ (12), ತಿಪಟೂರು ನಿವಾಸಿ ಭಾಗ್ಯಮ್ಮ (43), ಚಂದ್ರಶೇಖರ್ (48), ಮಧುಗಿರಿ ನಿವಾಸಿ ಜಯಣ್ಣ (30), ನಿರ್ವಾಹಕ ಅನಿಲ್‌ಕುಮಾರ್ ಗಾಯಗೊಂಡಿದ್ದು, ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗಂಭೀರವಾಗಿ ಗಾಯಗೊಂಡಿರುವ ಚಾಲಕ ಲಿಂಗಪ್ಪ ಅವರನ್ನು ಹಾವೇರಿ ಜಿಲ್ಲೆಗೆ ಕಳುಹಿಸಲಾಗಿದೆ. ಉಳಿದ ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗಳಿಗೆ ತೆರಳಿದ್ದಾರೆ.

ಶಿವಮೊಗ್ಗ ಘಟಕಕ್ಕೆ ಸೇರಿದ ರಾಜ್ಯ ಸಾರಿಗೆ ಸಂಸ್ಥೆ ಬಸ್ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿತ್ತು. ಬಸ್‌ನಲ್ಲಿ 44 ಪ್ರಯಾಣಿಕರಿದ್ದರು ಎನ್ನಲಾಗಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸಾರಿಗೆ ಅಧಿಕಾರಿಗಳ ಭೇಟಿ: ರಾಜ್ಯ ಸಾರಿಗೆ ಇಲಾಖೆ ಅಪಘಾತ ವಿಭಾಗದ ಅಧೀಕ್ಷಕ ಲಕ್ಷ್ಮೇಗೌಡ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ, ಚಿಕಿತ್ಸೆ ಪಡೆಯುತ್ತ್ತಿದ್ದ ಪ್ರಯಾಣಿಕರ ಆರೋಗ್ಯ ವಿಚಾರಿಸಿದರು. ಗಾಯಳುಗಳಿಗೆ ತಲಾ 5 ಸಾವಿರ ರೂ. ಮಧ್ಯಂತರ ಚಿಕಿತ್ಸಾ ವೆಚ್ಚ ಭರಿಸುತ್ತಿದ್ದು, ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದರೆ ಆ ವೆಚ್ಚವನ್ನೂ ಭರಿಸಲಾಗುವುದು ಎಂದು ತಿಳಿಸಿದರು.

ರಾಜ್ಯ ಸಾರಿಗೆ ಇಲಾಖೆ ಅಪಘಾತ ವಿಭಾಗದ ನಿರೀಕ್ಷಕ ಟಿ.ಎಂ.ನಟರಾಜು, ಸ್ಥಳೀಯ ಬಸ್ ಘಟಕ ವ್ಯವಸ್ಥಾಪಕ ಮಂಜುನಾಥ್, ಉಪಮುಖ್ಯ ಕಾರ್ಮಿಕ ಕಲ್ಯಾಣಾಧಿಕಾರಿ ರಾಧಾ ಮತ್ತಿತರರು ಉಪಸ್ಥಿತರಿದ್ದರು.

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...