

ಕುಂದಾಪುರ: ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಉಪಪ್ರಾಂಶುಪಾಲ ರಾಮ ದೇವಾಡಿಗ ರಾಜ್ಯಮಟ್ಟದಲ್ಲಿ ನೀಡಲಾಗುವ ಅಪರ್ಣಾ ನಿರೂಪಣಾ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ನಿರೂಪಕಿ ದಿವಂಗತ ಅಪರ್ಣಾ ಅವರ ಸ್ಮರಣಾರ್ಥ ನೀಡಲಾಗುವ ಈ ಗೌರವಾನ್ವಿತ ಪ್ರಶಸ್ತಿಯನ್ನು ಪ್ರಥಮ ಬಾರಿ ನೀಡಲಾಗುತ್ತಿದ್ದು, ಅ.15ರಂದು ಬೆಂಗಳೂರಿನ ಇಂಡೋ ಗ್ಲೋಬೋ ಕಾಲೇಜಿನಲ್ಲಿ ನಡೆದ 2024ರ ರಾಜ್ಯಮಟ್ಟದ ಶೈಕ್ಷಣಿಕ ಸಮ್ಮೇಳನದಲ್ಲಿ ಪ್ರದಾನ ಮಾಡಲಾಯಿತು.
ಸೂರ್ಯ ಫೌಂಡೇಶನ್, ಬೆಂಗಳೂರು, ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್, ಮೈಸೂರು ಹಾಗೂ ಸ್ಪಾರ್ಕ್ ಅಕಾಡೆಮಿ ಬೆಂಗಳೂರು ಕಾರ್ಯಕ್ರಮ ಆಯೋಜಿಸಿದ್ದವು. ರಾಜ್ಯದ ನಾಲ್ಕು ವಿಭಾಗಗಳಿಂದ ಆಯ್ಕೆಯಾದ ಶ್ರೇಷ್ಠ ನಿರೂಪಕರಿಗೆ ಈ ಪ್ರಶಸ್ತಿ ನೀಡಲಾಗುತ್ತಿದ್ದು, ಮೊದಲ ಸುತ್ತಿನ ಸ್ಪರ್ಧೆಯಲ್ಲಿ 748ಕ್ಕೂ ಹೆಚ್ಚು ನಿರೂಪಕರು ಭಾಗವಹಿಸಿದ್ದರು.