More

    ಎಪಿಎಂಸಿ ತಿದ್ದುಪಡಿ ಕಾಯ್ದೆ ವಾಪಸ್ ಪಡೆಯಿರಿ; ಕರ್ನಾಟಕ ರೈತ ಸಂಘ ತಾಲೂಕು ಸಮಿತಿ ಮನವಿ

    ಸಿಂಧನೂರು: ಕೇಂದ್ರ ಸರ್ಕಾರದ ವಿದ್ಯುತ್ ಕಾಯ್ದೆ ತಿದ್ದುಪಡಿ ಕರಡು ಪ್ರಸ್ತಾವನೆ ತಿರಸ್ಕರಿಸಬೇಕು. ಎಪಿಎಂಸಿ ತಿದ್ದುಪಡಿ ಕಾಯ್ದೆ ಮತ್ತು ಭೂ ಗುತ್ತಿಗೆ ತಿದ್ದುಪಡಿ ಕಾಯ್ದೆ ವಾಪಾಸ್ ಪಡೆಯಬೇಕೆಂದು ಒತ್ತಾಯಿಸಿ ಕರ್ನಾಟಕ ರೈತ ಸಂಘ ತಾಲೂಕು ಸಮಿತಿ ತಹಸಿಲ್ ಕಚೇರಿ ಶಿರಸ್ತೇದಾರ್ ಅಂಬಾದಾಸ್‌ಗೆ ಬುಧವಾರ ಮನವಿ ಸಲ್ಲಿಸಿತು.

    ಸುಗ್ರೀವಾಜ್ಞೆ ಮೂಲಕ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದಿರುವ ರಾಜ್ಯ ಸರ್ಕಾರದ ತೀರ್ಮಾನ ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ. ರಾಜ್ಯ ಸರ್ಕಾರ ಕಾಯ್ದೆ ವಾಪಾಸ್ ಪಡೆಯಬೇಕು. ಭೂ ಗುತ್ತಿಗೆ ತಿದ್ದುಪಡಿ ಕಾಯ್ದೆ ರದ್ದುಗೊಳಿಸಬೇಕು. ತರಕಾರಿ ಹಣ್ಣು ಬೆಳೆದು ನಷ್ಟ ಅನುಭವಿಸಿದ ರೈತರ ಪ್ರತಿ ಎಕರೆಗೆ ಭೂಮಿಗೆ 30 ಸಾವಿರ ರೂ. ಪರಿಹಾರ ನೀಡಬೇಕು. ಅಂತರ ಜಿಲ್ಲೆ, ಅಂತರ ರಾಜ್ಯದ ವಲಸೆ ಕಾರ್ಮಿಕರು ಮತ್ತು ಕೃಷಿಕರನ್ನು ಬಸ್, ಟ್ರೇನ್‌ಗಳಲ್ಲಿ ಉಚಿತ ಕಳಿಸಬೇಕು. ಉದ್ಯೋಗ ಖಾತ್ರಿ ಯೋಜನೆ ಸಮರ್ಪಕವಾಗಿ ಜಾರಿಗೊಳಿಸಬೇಕು. ಯೋಜನೆಯನ್ನು ಸಣ್ಣ ಪಟ್ಟಣ ಮತ್ತು ನಗರಗಳಿಗೆ ವಿಸ್ತರಿಸಿ, ನಿರುದ್ಯೋಗ ಸಮಸ್ಯೆಯಿಂದ ಕುಟುಂಬಗಳಿಗೆ ಸಹಾಯ ಮಾಡಬೇಕು. ಕರೊನಾ ಸಂಕಷ್ಟದ ಅವಧಿಯ ಕಾರ್ಮಿಕರ ಎರಡು ತಿಂಗಳ ವೇತನ ಪಾವತಿಸಲು ಸರ್ಕಾರ ಕಂಪನಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಯಿತು.

    ಸಮಿತಿ ಅಧ್ಯಕ್ಷ ಡಿ.ಎಚ್.ಪೂಜಾರ, ತಾಲೂಕು ಅಧ್ಯಕ್ಷ ರಮೇಶ ಪಾಟೀಲ್, ತಾಲೂಕು ಕಾರ್ಯದರ್ಶಿ ಬಸವರಾಜ ಬೆಳಗುರ್ಕಿ, ಚಿಟ್ಟಿಬಾಬು, ಎಂ.ಗಂಗರಾಜ, ಅಮೀನಸಾಬ್, ಮಲ್ಲಿಕಾರ್ಜುನ, ರಡ್ಡೆಪ್ಪ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts