More

    ಸವಣೂರ ಎಪಿಎಂಸಿಗೆ ಅವಿರೋಧ ಆಯ್ಕೆ

    ಸವಣೂರ: ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ನೂತನ ಅಧ್ಯಕ್ಷರಾಗಿ ನಿಂಗಪ್ಪ ಮರಗಪ್ಪನವರ ಹಾಗೂ ಉಪಾಧ್ಯಕ್ಷರಾಗಿ ಉಜ್ಜಪ್ಪ ತಳವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

    ಒಟ್ಟು 16 ಸದಸ್ಯರಿರುವ ಎಪಿಎಂಸಿಗೆ ಶನಿವಾರ ಆಯೋಜಿಸಿದ್ದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸವಣೂರ ಕ್ಷೇತ್ರದ ನಿಂಗಪ್ಪ ಮರಗಪ್ಪನವರ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಕಡಕೋಳ ಕ್ಷೇತ್ರದ ಉಜ್ಜಪ್ಪ ತಳವಾರ ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಪರಿಶೀಲನಾ ವೇಳೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ತಲಾ ಒಬ್ಬರು ಮಾತ್ರ ಕಣದಲ್ಲಿ ಉಳಿದಿದ್ದರಿಂದ ಅವಿರೋಧ ಆಯ್ಕೆ ಘೊಷಿಸಲಾಯಿತು.

    ಚುನಾವಣಾ ಅಧಿಕಾರಿಯಾಗಿ ತಹಸೀಲ್ದಾರ್ ಮಲ್ಲಿಕಾರ್ಜುನ ಹೆಗ್ಗನ್ನವರ, ಎಪಿಎಂಸಿ ಸಮಿತಿಯ ಕಾರ್ಯದರ್ಶಿ ವೀರನಗೌಡ ಪಾಟೀಲ ಹಾಗೂ ಸಮಿತಿಯ ಎಲ್ಲ ಸದಸ್ಯರು ಮತ್ತು ಸಿಬ್ಬಂದಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts