More

    ಎಪಿಎಂಸಿ ಕಾಯ್ದೆ ತಿದ್ದುಪಡಿ ರದ್ಧತಿಗೆ ಆಗ್ರಹ

    ವಿಜಯಪುರ: ಕೇಂದ್ರ ಸರ್ಕಾರ ಎಪಿಎಂಸಿ ಕಾಯ್ದೆ 2017ಕ್ಕೆ ತಿದ್ದುಪಡಿ ಮಾಡಿರುವುದನ್ನು ರದ್ದುಪಡಿಸಿ ಸುಗ್ರೀವಾಜ್ಞೆ ಹಿಂಪಡೆಯುವಂತೆ ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘ ಹಾಗೂ ಕರ್ನಾಟಕ ಪ್ರಾಂತ ರೈತ ಸಂಘದ ಪದಾಧಿಕಾರಿಗಳು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಮೂಲಕ ರಾಜ್ಯಪಾಲರಿಗೆ ಹಾಗೂ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

    ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಭೀಮಶಿ ಕಲಾದಗಿ ಹಾಗೂ ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ಈ ಮೊದಲು ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರಲು ಸರ್ಕಾರ ಮುಂದಾಗಿತ್ತು. ದೇಶದ ರೈತಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದರಿಂದ ಕಾಯ್ದೆ ತಿದ್ದುಪಡಿ ಕೈಬಿಡಲಾಗಿತ್ತು. ಆದರೆ, ಈಗ ಮತ್ತೆ ಎಪಿಎಂಸಿ ಕಾಯ್ದೆ ತಿದ್ದುಪಡಿ ಮಾಡಿ ಸುಗ್ರೀವಾಜ್ಞೆ ಹೊರಡಿಸಲಾಗಿದೆ. ಇದರಿಂದ ರೈತರು, ಹಮಾಲರು, ಅಡತಿ ಅಂಗಡಿಯವರು, ಗುಮಾಸ್ತರಿಗೆ ತೀವ್ರ ತೊಂದರೆಯಾಗಲಿದೆ. ಆದ್ದರಿಂದ ಕಾಯ್ದೆ ತಿದ್ದುಪಡಿ ಮಾಡಿರುವುದನ್ನು ರದ್ದುಪಡಿಸಿ ಸುಗ್ರೀವಾಜ್ಞೆ ಹಿಂಪಡೆಯಬೇಕೆಂದು ಆಗ್ರಹಿಸಿದರು.

    ಬಹುರಾಷ್ಟ್ರೀಯ ಕಂಪನಿಗಳಿಗೆ ರೈತರಿಂದ ನೇರವಾಗಿ ಖರೀದಿಗೆ ಅನುವು ಮಾಡಿಕೊಟ್ಟರೆ ಪ್ರತಿ ಎಪಿಎಂಸಿಯಿಂದ 30 ರಿಂದ 35 ಸಾವಿರದಷ್ಟು ಅವಲಂಬಿತ ವ್ಯಾಪಾರಸ್ಥರು, ಹಮಾಲರು, ಗುಮಾಸ್ತರು, ತಳದವರು, ಉದ್ಯೋಗ ಕಳೆದುಕೊಂಡು ಬೀದಿಪಾಲಾಗುತ್ತಾರೆ. ಆದ್ದರಿಂದ ರೈತವಿರೋಧಿ ಆಗಿರುವ ಈ ತಿದ್ದುಪಡಿ ಕಾಯ್ದೆಯನ್ನು ರದ್ದುಪಡಿಸಬೇಕೆಂದು ಆಗ್ರಹಿಸಿದರು. ಇಲ್ಲದಿದ್ದರೆ ರಾಜ್ಯದ ರೈತ ಪರ ಸಂಘಟನೆಗಳು ಜಂಟಿಯಾಗಿ ಹೋರಾಟ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
    ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸದಾಶಿವ ಬರಟಗಿ, ಭೀಮಣ್ಣ ಪೂಜಾರಿ, ಹೊನಕೇರಪ್ಪ ತೆಲಗಿ, ಚಂದ್ರಾಮ ತೆಗ್ಗಿ, ಧರೆಪ್ಪ ಅವಟಿ, ಯಶವಂತ ರಣದೀರೆ ಇನ್ನಿತರರು ಉಪಸ್ಥಿತರಿದ್ದರು.

    ಎಪಿಎಂಸಿ ಕಾಯ್ದೆ ತಿದ್ದುಪಡಿ ರದ್ಧತಿಗೆ ಆಗ್ರಹ
    ಎಪಿಎಂಸಿ ಕಾಯ್ದೆ ತಿದ್ದುಪಡಿ ರದ್ಧತಿಗೆ ಆಗ್ರಹ
    ಎಪಿಎಂಸಿ ಕಾಯ್ದೆ ತಿದ್ದುಪಡಿ ರದ್ಧತಿಗೆ ಆಗ್ರಹ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts