More

    VIDEO| ಮಹಿಳಾ ಮೀಸಲಾತಿ ಮಸೂದೆ ನಮ್ಮದು: ಸೋನಿಯಾ ಗಾಂಧಿ

    ನವದೆಹಲಿ: ಸಂಸತ್ತಿನ ವಿಶೇಷ ಅಧಿವೇಶನಲ್ಲಿ ಮಹಿಳಾ ಮೀಸಲಾತಿ ಮಸೂದೆ ಅಂಗೀಕರವಾಗುವ ಸಾಧ್ಯತೆ ದಟ್ಟವಾಗಿದೆ. ಇನ್ನೂ ಈ ಕುರಿತು ಪ್ರತಿಕ್ರಿಯಿಸಿರುವ ಸೋನಿಯಾ ಗಾಂಧಿ ಈ ಮಸೂದೆ ನಮ್ಮದು ಎಂದಿದ್ದಾರೆ.

    ಸೆಪ್ಟೆಂಬರ್​ 18ದಿಂದ ಶುರುವಾಗಿರುವ ಐದು ದಿನಗಳ ವಿಶೇಷ ಅಧಿವೇಶನದಲ್ಲಿ ಭಾಗಿಯಾಗಲು ಬಂದ ಸೋನಿಯಾ ಗಾಂಧಿ ಅವರಿಗೆ ಮಹಿಳಾ ಮೀಸಲಾತಿ ಮಸೂದೆ ಕುರಿತು ಕೇಳಿದಾಗ ‘ಇದು ನಮ್ಮದು, ಅಪ್ನಾ ಹೈ’ ಎಂದು ಪ್ರತಿಕ್ರಿಯಿಸಿದ್ದಾರೆ.

    ಇದನ್ನೂ ಓದಿ: ತಮಿಳಿನ ಖ್ಯಾತ ನಟ ವಿಜಯ್​ ಆಂಟೋನಿ ಪುತ್ರಿ ಆತ್ಮಹತ್ಯೆ

    ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಎಐಸಿಸಿ ಪ್ರದಾನ ಕಾರ್ಯದರ್ಶಿ, ರಾಜ್ಯಸಭೆ ಸದಸ್ಯ ಜೈರಾಮ್​ ರಮೇಶ್​ ಮಹಿಳಾ ಮೀಸಲಾತಯಿ ಮಸೂದೆಯನ್ನು ಸರ್ಕಾರ ಅಂಗೀಕರಿಸಿದರೆ ನಾವು ಅದನ್ನು ಸಂಪೂರ್ಣವಾಗಿ ಸ್ವಾಗತಿಸುತ್ತೇವೆ. ಮಸೂದೆಯ ಪೂರ್ಣ ವಿವರಗಳಿಗಾಗಿ ಕಾಯುತ್ತಿದ್ದೇವೆ.

    ವಿಶೇಷ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರವಾದರೆ ಕಾಂಗ್ರೆಸ್​ ಮತ್ತು ಅದರ ಮಿತ್ರಪಪಕ್ಷಗಳ ಹೋರಾಟಕ್ಕೆ ಜಯ ಸಿಕ್ಕಂತಾಗುತ್ತದೆ ಎಂದು ಎಐಸಿಸಿ ಪ್ರದಾನ ಕಾರ್ಯದರ್ಶಿ, ರಾಜ್ಯಸಭೆ ಸದಸ್ಯ ಜೈರಾಮ್​ ರಮೇಶ್​ ಬರೆದುಕೊಂಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts