ದೇವಸ್ಥಾನದಲ್ಲಿ ಕ್ಷಮೆಯಾಚಿಸು ಅಥವಾ 5 ಕೋಟಿ ಹಣ ಕೊಡು ಇಲ್ಲಾಂದ್ರ... ಸಲ್ಮಾನ್​ ಖಾನ್​ಗೆ Lawrence Bishnoi ಸಹೋದರನಿಂದ ಮತ್ತೊಂದು ಬೆದರಿಕೆ

Salman Bishnoi
Published on

ಮುಂಬೈ: ಅಕ್ಟೋಬರ್​ 12ರಂದು ಮಾಜಿ ಸಚಿವ, ಎಸ್​ಸಿಪಿ ನಾಯಕ ಬಾಬಾ ಸಿದ್ದಿಕ್ಕಿರನ್ನು (Baba Siddique) ಹತ್ಯೆ ಮಾಡಿಸುವ ಮೂಲಕ ವಿಶ್ವಾದಾದ್ಯಂತ ಸಖತ್​ ಸೌಂಡ್​ ಮಾಡಿದ್ದ ಕುಖ್ಯಾತ ಗ್ಯಾಂಗ್​ಸ್ಟರ್​ ಲಾರೆನ್ಸ್​ ಬಿಷ್ಣೋಯ್ (Lawrence Bishnoi)​ ಮುಂದಿನ ಟಾರ್ಗೆಟ್​ ಸಲ್ಮಾನ್​ ಖಾನ್​ ಎಂದು ತಿಳಿದು ಬಂದಿದ್ದು, ಬಿಷ್ಣೋಯ್​ನಿಂದ ಕೊಲೆ ಬೆದರಿಕೆಗಳನ್ನು ಎದುರಿಸುತ್ತಿರುವ ಖಾನ್​ಗೆ ಇದೀಗ ಲಾರೆನ್ಸ್ ಸಹೋದರ ಹೊಸ ಬೆದರಿಕೆಯನ್ನು ಹಾಕಿದ್ದಾನೆ.

ಮುಂಬೈ ಪೊಲೀಸ್ ಟ್ರಾಫಿಕ್ ಕಂಟ್ರೋಲ್ ಸೆಲ್‌ಗೆ ಬೆದರಿಕೆ ಸಂದೇಶ ಬಂದಿದ್ದು, ಕಳೆದ 10 ದಿನದ ಅವಧಿಯಲ್ಲಿ ಇದು ಮೂರನೇ ಬೆದರಿಕೆಯಾಗಿದ್ದು, ಸಲ್ಮಾನ್​ ಖಾನ್​ಗೆ (Salman Khan) ಭದ್ರತೆಯನ್ನು ಹೆಚ್ಚಿಸಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು (Senior Police Officer),  ಲಾರೆನ್ಸ್ ಬಿಷ್ಣೋಯ್ (Lawrence Bishnoi) ಸಹೋದರ ಎಂದು ಹೇಳಿಕೊಂಡು ವ್ಯಕ್ತಿಯಿಂದ ಬೆದರಿಕೆ ಬಂದಿದೆ. ಸಲ್ಮಾನ್ ಖಾನ್ (Salman Khan) ದೇವಸ್ಥಾನಕ್ಕೆ ಹೋಗಿ ತಪ್ಪಾಯ್ತು ಎಂದು ಕ್ಷಮೆ ಕೇಳಬೇಕು ಅಥವಾ 5 ಕೋಟಿ ರೂ. ಕೊಡಬೇಕು ಇಲ್ಲವಾದಲ್ಲಿ ಕೊಲ್ಲುವುದೊಂದೇ ದಾರಿ ಎಂದು ಹೇಳಿದ್ದಾರೆ. ಬೆದರಿಕೆ ಸಂಬಂಧ ಅಧಿಕಾರಿಗಳು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು (Senior Police Officer) ತಿಳಿಸಿದ್ದಾರೆ.

ಅಕ್ಟೋಬರ್​ 30ರಂದು ಅಪರಿಚಿತ ವ್ಯಕ್ತಿಯೋರ್ವ ಮುಂಬೈ ಟ್ರಾಫಿಕ್ ಪೊಲೀಸರಿಗೆ ಕರೆ ಮಾಡಿ 2 ಕೋಟಿ ರೂ. ಕೊಡದಿದ್ದರೆ ಸಲ್ಮಾನ್​ ಖಾನ್​ರನ್ನು ಕೊಲೆ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದರು. ಬೆದರಿಕೆ ಸಂದೇಶ ಬಂದ ನಂತರ ಮುಂಬೈನ ವರ್ಲಿ ಜಿಲ್ಲೆಯ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net