ಕಾರಂತ ಪ್ರಶಸ್ತಿಗೆ ಅಪ್ಪಣ್ಣ ಆಯ್ಕೆ

appana
ಅಪ್ಪಣ್ಣ
Published on

ಕುಂದಾಪುರ: ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಸೇವಾ ಕ್ಷೇತ್ರಗಳಲ್ಲಿ ಏಳು ದಶಕಗಳಿಂದ ಸೇವೆ ಸಲ್ಲಿಸುತ್ತಾ ಬಂದಿರುವ ಮಾಜಿ ಶಾಸಕ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಬಸ್ರೂರು ಕ್ಷೇತ್ರ ಆಡಳಿತ ಧರ್ಮದರ್ಶಿ, ಧರ್ಮಸ್ಥಳ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಉಡುಪಿ ಜಿಲ್ಲಾ ಸ್ಥಾಪಕ ಅಧ್ಯಕ್ಷ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರನ್ನು ಕುಂದಾಪುರದ ಕುಂದಪ್ರಭ ಸಂಸ್ಥೆಯಿಂದ ನೀಡಲಾಗುತ್ತಿರುವ ಕೋ.ಮ.ಕಾರಂತ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಂಚಾಲಕ ಕೋ.ಶಿವಾನಂದ ಕಾರಂತ ತಿಳಿಸಿದ್ದಾರೆ. ಬಸ್ರೂರು ಅಪ್ಪಣ್ಣ ಹೆಗ್ಡೆ ಅವರ ವಿವಿಧ ಕ್ಷೇತ್ರಗಳ ಸಾಧನೆ ಪರಿಗಣಿಸಿ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಎಂದು ಕುಂದಪ್ರಭ ಸಂಸ್ಥೆ ಅಧ್ಯಕ್ಷ ಯು.ಎಸ್.ಶೆಣೈ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net