ವನ್ಯ ಪ್ರಾಣಿಗಳ ಹಾವಳಿ ತಡೆಗೆ ಕ್ರಮಕ್ಕೆ ಮನವಿ : ಅರಣ್ಯ ಸಚಿವರನ್ನು ಭೇಟಿಯಾದ ಶಾಸಕಿ ಭಾಗೀರಥಿ ಮುರುಳ್ಯ

New Project (7)
Published on

ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಅವರು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರನ್ನು ಭೇಟಿ ಮಾಡಿ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಮಿತಿ ಮೀರಿರುವ ವನ್ಯ ಪ್ರಾಣಿಗಳ ಹಾವಳಿಯನ್ನು ತಡೆಯಲು ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದರು.

ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಹುತೇಕ ಕೃಷಿ ಪ್ರಧಾನವಾಗಿರುವ ಪ್ರದೇಶವಾಗಿದ್ದು, ಜನರು ಜೀವನೋಪಾಯಕ್ಕಾಗಿ ಕೃಷಿ ಚಟುವಟಿಕೆ ಮತ್ತು ಅದರ ಆದಾಯವನ್ನೇ ನಂಬಿಕೊಂಡಿದ್ದಾರೆ. ಕ್ಷೇತ್ರದಲ್ಲಿ ಎರಡು ಕಂದಾಯ ತಾಲೂಕುಗಳು ಬರುತ್ತಿದ್ದು ಒಟ್ಟು 75 ಕಂದಾಯ ಗ್ರಾಮಗಳನ್ನು ಒಳಗೊಂಡಿವೆ. ಗ್ರಾಮಗಳು ಬೆಟ್ಟ, ಗುಡ್ಡ, ಕಾಡು ಪ್ರದೇಶಗಳು ಹೊಂದಿಕೊಂಡಿರುವಂತಹ ಪ್ರದೇಶವಾಗಿದ್ದು, ಆನೆ, ಕಾಡುಕೋಣ, ಹಂದಿ ಮತ್ತಿತರ ಪ್ರಾಣಿಗಳಿಂದ ಕೃಷಿಗೆ ಹಾನಿಯಾಗುತ್ತಿದೆ. ಇದರಿಂದ ಕೃಷಿಕರು ಗಂಭೀರ ಸಮಸ್ಯೆ ಎದುರಿಸುತ್ತಿದ್ದು, ಇದರ ತಡೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಕೃಷಿಕರಿಗೆ ಆಗುತ್ತಿರುವ ಸಮಸ್ಯೆಯನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ರಾಜ್ಯ ಸರ್ಕಾರ ಹಾಗೂ ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ವಿನಂತಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net