ಆರೋಗ್ಯ ಕೇಂದ್ರ ನಿರ್ಮಾಣ ಅನುದಾನಕ್ಕೆ ಮನವಿ

kota
Published on

ಕೋಟ: ಕೋಟತಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಡುಕರೆಯಲ್ಲಿ ಈಗಾಗಲೇ ದಾನಿಗಳ ಸಹಕಾರದಿಂದ 14 ಸೆಂಟ್ಸ್ ಜಾಗವನ್ನು ಆರೋಗ್ಯ ಇಲಾಖೆಗೆ ಹಸ್ತಾಂತರಿಸಲಾಗಿದ್ದು, ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಿಸಲು ಅನುದಾನ ಕೋರಿ ಕೋಟತಟ್ಟು ಪಂಚಾಯಿತಿ ನಿಯೋಗ ಜಿಲ್ಲಾ ಆರೋಗ್ಯ ಅಧಿಕಾರಿ ನಾಗಭೂಷಣ್ ಉಡುಪ ಅವರನ್ನು ಭೇಟಿ ಮಾಡಿ ಅಗತ್ಯ ದಾಖಲೆ ಸಲ್ಲಿಸಿತು.

ಕೋಟತಟ್ಟು ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪಿಸುವುದು ಪ್ರಮುಖವಾಗಿದೆ ಎಂದು ಗ್ರಾ.ಪಂ. ಅಧ್ಯಕ್ಷ ಸತೀಶ್ ಕುಂದರ್ ಬಾರಿಕೆರೆ ಹೇಳಿದರು. ಸಂಬಂಧಪಟ್ಟ ಇಲಾಖೆಗೆ ಪ್ರಸ್ತಾವನೆ ಕಳಿಸಲಾಗುವುದು ಎಂದು ಡಿಎಚ್‌ಒ ತಿಳಿಸಿದರು.

ಗ್ರಾ.ಪಂ. ಉಪಾಧ್ಯಕ್ಷೆ ಸರಸ್ವತಿ, ಸದಸ್ಯರಾದ ರವೀಂದ್ರ ತಿಂಗಳಾಯ, ಅಶ್ವಿನಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಮಾಧವ ಪೈ, ಆರೋಗ್ಯ ನಿರೀಕ್ಷಕ ಹರೀಶ್ಚಂದ್ರ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net