

ಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಕರ್ನಾಟಕ ರಾಜ್ಯದ ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಅವರನ್ನು ಬೆಂಗಳೂರಿನಲ್ಲಿ ಗುರುವಾರ ಭೇಟಿ ಮಾಡಿ ಸರ್ಕಾರಿ ಆಸ್ಪತ್ರೆಯಲ್ಲಿನ ಸಮುದಾಯ ಆರೋಗ್ಯ ಕೇಂದ್ರದ ತಜ್ಞ ವೈದ್ಯರನ್ನು ಸ್ಥಳಾಂತರ ಮಾಡದಂತೆ ಮನವಿ ಮಾಡಿದರು.
ರಾಜ್ಯದಲ್ಲಿ ಸಮುದಾಯ ಆರೋಗ್ಯ ಕೇಂದ್ರದಲ್ಲಿನ ತಜ್ಞ ವೈದ್ಯರನ್ನು ಸ್ಥಳಾಂತರಿಸುತ್ತಿರುವುದು ಕಂಡು ಬಂದಿದೆ. ಗ್ರಾಮೀಣ ಭಾಗದ ಆರೋಗ್ಯ ಕೇಂದ್ರಗಳಾದ ಬ್ರಹ್ಮಾವರ, ಕೋಟ, ಬೈಂದೂರು, ಆಸ್ಪತ್ರೆಗಳಲ್ಲಿನ ತಜ್ಞ ವೈದ್ಯರನ್ನು ಯಾವುದೇ ಕಾರಣಕ್ಕೆ ಸ್ಥಳಾಂತರ ಮಾಡದಂತೆ ಸಚಿವರ ಗಮನಕ್ಕೆ ತಂದ ಶಾಸಕ ಕೊಡ್ಗಿ, ಗ್ರಾಮೀಣ ಭಾಗದ ಬಡ ಅನಾರೋಗ್ಯ ಪೀಡಿತರು, ಮಕ್ಕಳು ಹೆಚ್ಚಿನ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಯಲ್ಲಿನ ಸಮುದಾಯ ಭವನಕ್ಕೆ ಆಗಮಿಸುತ್ತಾರೆ. ಸ್ಥಳೀಯವಾಗಿ ಯಾವುದೇ ಆಸ್ಪತ್ರೆ ಇಲ್ಲದಿರುವುದರಿಂದ ಅವರಿಗೆ ತೊಂದರೆಯಾಗುವ ಹಿನ್ನೆಲೆಯಲ್ಲಿ ತಜ್ಞ ವೈದ್ಯರನ್ನು ಸ್ಥಳಾಂತರ ಮಾಡದಂತೆ ಮನವಿ ಪತ್ರ ನೀಡಿ ವಿನಂತಿಸಿದ್ದಾರೆ.