More

    1375 ದಿನಗೂಲಿ ನೌಕರರ ಸೇವೆ ಸಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಮನವಿ

    ಬೆಂಗಳೂರು: ಕರ್ನಾಟಕ ಕಟ್ಟಡ ಮತ್ತು ನಿರ್ಮಾಣ ನಿಗಮದಲ್ಲಿ ದಿನಗೂಲಿ ಆಧಾರದ ಮೇಲೆ ಜಲಸಂಪನ್ಮೂಲ ಇಲಾಖೆಯಡಿ ಕಾರ್ಯನಿರ್ವಹಿಸಿರುವ ಸುಮಾರು 1375 ಸಿ ಮತ್ತು ಡಿ ದರ್ಜೆ ನೌಕರರ ಸೇವೆಯನ್ನು ಸಕ್ರಮಗೊಳಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಗಿದೆ.

    ಕರ್ನಾಟಕ ರಾಜ್ಯ ವಿವಿಧ ಇಲಾಖೆಗಳ ದಿನಗೂಲಿ, ಗುತ್ತಿಗೆ, ಹೊರಗುತ್ತಿಗೆ ನೌಕರರು ಮತ್ತು ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಅದರ ಅಧ್ಯಕ್ಷ ಸಿದ್ದಪ್ಪ ಎಸ್. ಕಲಬಾಶೆಟ್ಟಿ ಮತ್ತು ಇತರ ಪದಾಧಿಕಾರಿಗಳು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

    ಇದನ್ನೂ ಓದಿ: ಹ್ಯಾಕರ್ ಶ್ರೀಕಿ ಪ್ರಾಣಕ್ಕೆ ಅಪಾಯವಿದೆ, ಸೂಕ್ತ ಭದ್ರತೆ ಕೊಡಿ: ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯ

    ಮಾರ್ಕಂಡೇಯ ಯೋಜನೆಯಲ್ಲಿ ಈ ಎಲ್ಲ ನೌಕರರು ಅನೇಕ ವರ್ಷಗಳಿಂದ ಕಾರ್ಯನಿರ್ವಹಿಸಿದ್ದಾರೆ. ಇವರನ್ನು ಕರ್ನಾಟಕ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮ 2012ರ ಅನ್ವಯ ಅರ್ಹ ದಿನಗೂಲಿ ನೌಕರರೆಂದು ಸಕ್ರಮಗೊಳಿಸಬೇಕು. ಇದಕ್ಕೆ ಹಿಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ಸರ್ಕಾರದ ಅವಧಿಯಲ್ಲಿ ಒಪ್ಪಿಗೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಈಗಿನ ಸಚಿವ ಸಂಪುಟ ಸಭೆಯಲ್ಲಿಯೂ ಈ ಕುರಿತು ಚರ್ಚಿಸಿ ನೌಕರರ ಹಿತಕ್ಕೆ ಅನುಗುಣವಾಗಿ ಶೀಘ್ರವೇ ಒಂದು ತೀರ್ಮಾನ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

    ಈತನ ಹುಟ್ಟೇ ಗಿನ್ನೆಸ್​ ವರ್ಲ್ಡ್​ ರೆಕಾರ್ಡ್​; ತಾಯಿ ಗರ್ಭದಿಂದ ಇವನಿಗಿಂತಲೂ ಬೇಗ ಬಂದು ಇನ್ನೂ ಬದುಕಿರುವವರೇ ಇಲ್ಲ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts