More

    ಕುಂಚಿಟಿಗ ಅಭಿವೃದ್ಧಿ ನಿಗಮ ಸ್ಥಾಪಿಸಲು ಸಿಎಂಗೆ ಎಲೆರಾಂಪುರ ಡಾ. ಹನುಮಂತನಾಥ ಸ್ವಾಮೀಜಿ ಮನವಿ

    ಕೊರಟಗೆರೆ : ಕುಂಚಿಟಿಗ ಅಭಿವೃದ್ಧಿ ನಿಗಮ ಅಥವಾ ಮಂಡಳಿ ಸ್ಥಾಪನೆ ಮತ್ತು ಜನಾಂಗವನ್ನು ಕೇಂದ್ರ ಒಬಿಸಿ ಪಟ್ಟಿಗೆ ಸೇರಿಸಬೇಕು ಎಂದು ಎಲೆರಾಂಪುರ ಕುಂಚಿಟಿಗ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ. ಹನುಮಂತನಾಥ ಸ್ವಾಮೀಜಿ ನೇತೃತ್ವದಲ್ಲಿ ಸಮುದಾಯದ ಮುಖಂಡರು, ಬೆಂಗಳೂರಿನ ಸಿಎಂ ಕಚೇರಿಯಲ್ಲಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.

    ರಾಜ್ಯದಲ್ಲಿ ಸುಮಾರು 25 ಲಕ್ಷ ಕುಂಚಿಟಿಗರಿದ್ದು, ತುಮಕೂರು, ಬೆಂ.ಗ್ರಾ., ಚಿತ್ರದುರ್ಗ, ರಾಮನಗರ, ಶಿವಮೊಗ್ಗ ಜಿಲ್ಲೆಗಳು ಸೇರಿ 18 ವಿಧಾನಸಭಾ ಕ್ಷೇತ್ರಗಳಲ್ಲಿ ಜನಾಂಗದ ಪ್ರಾಬಲ್ಯ ಇದೆ. ಕೆಲವು ಕ್ಷೇತ್ರಗಳಲ್ಲಿ ಜನಾಂಗದ ಮತಗಳು ನಿರ್ಣಾಯಕವಾಗಿವೆ. ಆದರೆ, ರಾಜಕೀಯ ಪಕ್ಷಗಳಿಗೆ ಚುನಾವಣಾ ಸಮಯದಲ್ಲಿ ಮಾತ್ರ ಜನಾಂಗ ನೆನಪಿಗೆ ಬರುತ್ತದೆ ಎಂದು ಮುಖಂಡರು ತಿಳಿಸಿದರು.

    ಸಮುದಾಯವು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಹಿಂದುಳಿದಿದ್ದು, ಜನಾಂಗದ ಸರ್ವಾಂಗೀಣ ಅಭಿವೃದ್ಧಿಗೆ ನಿಗಮ ಮಂಡಳಿ ಸ್ಥಾಪಿಸಿ ಹಾಗೂ ಕೇಂದ್ರ ಸರ್ಕಾರ ಒಬಿಸಿ ಪಟ್ಟಿಗೆ ಸೇರಿಸಲು ಸಹಕರಿಸುವಂತೆ ಒತ್ತಾಯಿಸಿದರು.

    ಜನಾಂಗವನ್ನು ಒಬಿಸಿ ಪಟ್ಟಿಗೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಹಾಗೂ ನಿಗಮ ಮಂಡಳಿ ಸ್ಥಾಪನೆಗೆ ಸದನದಲ್ಲಿ ಚರ್ಚಿಸಿ ಶೀಘ್ರವೇ ತೀರ್ಮಾನ ಕೈಗೊಳ್ಳಲಾಗುವುದು.
    ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ

    ನಮ್ಮ ಮನವಿಗೆ ಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಹೆಚ್ಚಿನ ಸಂಖ್ಯೆಯಲ್ಲಿರುವ ಸಮುದಾಯದವರನ್ನು ರಾಜಕೀಯ ಪಕ್ಷಗಳು ಮತಕ್ಕಾಗಿ ಬಳಸಿಕೊಳ್ಳುತ್ತಿವೆ. ಹೀಗಾಗಿ ನಿಗಮ ಮಂಡಳಿ ಸ್ಥಾಪಿಸಿ, ಒಬಿಸಿ ಪಟ್ಟಿಗೆ ಸೇರ್ಪಡಿಸಿ ಇತರ ಹಿಂದುಳಿದ ವರ್ಗಗಳಿಗೆ ನೀಡುವ ಸೌಲಭ್ಯಗಳನ್ನು ಜನಾಂಗಕ್ಕೂ ನೀಡುವಂತೆ ಮನವಿ ಮಾಡಿದ್ದೇವೆ.
    ಡಾ. ಹನುಮಂತನಾಥ ಸ್ವಾಮೀಜಿ, ಪೀಠಾಧ್ಯಕ್ಷ, ಎಲೆರಾಂಪುರ ಕುಂಚಿಟಿಗ ಮಹಾಸಂಸ್ಥಾನ ಮಠ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts