ಡಿ.20 ರಿಂದ ಮಂಡ್ಯದಲ್ಲಿ ನಡೆಯುವ ಅಖಿಲ ಭಾರತ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕಲ್ಯಾಣ ಕರ್ನಾಟಕಕ್ಕೆ ಆದ್ಯತ ನೀಡುವ ಮೂಲಕ ಸಮಾನ ಅವಕಾಶ ಒದಗಿಸಬೇಕೆಂದು ಕಲ್ಯಾಣ ಕರ್ನಾಟಕ ನಿವಾಸಿಗಳ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸಂಘ ಒತ್ತಾಯಿಸಿದೆ.
ಈ ಸಂಬಂಧ ಕನ್ನಡ ಸಾಹಿತ್ಯ ಪರಿಷತ್ತಿ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿರುವ ಸಂಘದ ಅಧ್ಯಕ್ಷ ಚಂದ್ರಕಾಂತ ಭಂಡಾರೆ, ಈ ಹಿಂದಿನ ಸಮ್ಮೇಳನಗಳಲ್ಲಿ ಕಲ್ಯಾಣ ಕರ್ನಾಟಕ ಭಾಗದ ಸಾಹಿತಿಗಳು, ಕಲಾವಿದರಿಗೆ ಸರಿಯಾದ ಅವಕಾಶ ದೊರೆತಿಲ್ಲ. ನಂಡುಂಡಪ್ಪ ವರದಿಯಲ್ಲಿ ಕಲ್ಯಾಣ ಕರ್ನಾಟಕದ ಸಾಂಸ್ಕೃತಿಕ ಅಭಿವೃದ್ಧಿಗೂ ಅವಕಾಶ ನೀಡುವ ಪ್ರಸ್ತಾಪವಿದ್ದು, ಹಿಂದಿನ ತಪ್ಪು ಮರುಕಳಿಸದಂತೆ ಈ ಸಮ್ಮೇಳನದಲ್ಲಿ ಸರ್ವರಿಗೂ ಸಮಾನ ಅವಕಾಶ ದೊರೆಯುವಂತೆ ಎಚ್ಚರ ವಹಿಸಲು ಕೋರಿದ್ದಾರೆ.
ದೇಶದ ಅಭಿವೃದ್ಧಿ ಪ್ರತಿಯೊಬ್ಬರ ಜವಾಬ್ದಾರಿ; ಎಂಎಸ್‌ಆರ್ ಸುಸ್ಥಿರ ಅಭಿವೃದ್ಧಿ ಶೃಂಗಸಭೆ