ಕಾಸರಗೋಡು: ಕಾಸರಗೋಡಿನ ಕನ್ನಡಿಗರ ಹಕ್ಕುಗಳನ್ನು ಸಂರಕ್ಷಣೆ ಮಾಡಬೇಕು, ಕನ್ನಡಿಗರ ಉದ್ಯೋಗ ಮೀಸಲಾತಿ ಇಲ್ಲದಾಗಿಸಲು ನಡೆಸುವ ಹುನ್ನಾರ ಕೊನೆಗಾಣಿಸಬೇಕು, ಕನ್ನಡ ಪ್ರದೇಶದ ಅಂಗನವಾಡಿಗಳಲ್ಲಿ ಕನ್ನಡದ ಶಿಕ್ಷಕಿಯರನ್ನು ನೇಮಿಸಬೇಕು, ಕನ್ನಡ ಅರ್ಜಿಗಳಿಗೆ ಕನ್ನಡದಲ್ಲೇ ತೀರ್ಪು ಕಲ್ಪಿಸುವ ವ್ಯವಸ್ಥೆ ಮಾಡಬೇಕು ಇತ್ಯಾದಿ 21 ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ಕರ್ನಾಟಕ ಸಮಿತಿಯ ನೇತೃತ್ವದಲ್ಲಿ ನ.7ರಂದು ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿಯವರಿಗೆ ಕರ್ನಾಟಕ ಸಮಿತಿ ಅಧ್ಯಕ್ಷ ಕೆ.ಎಂ.ಬಳ್ಳಕ್ಕುರಾಯ, ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ.ಜಯಪ್ರಕಾಶ್ ನಾರಾಯಣ ತೊಟೆತ್ತೋಡಿ,ಸತ್ಯನಾರಾಯಣ ತಂತ್ರಿ ಕರ್ನಾಟಕ ಗಮಕ ಕಲಾ ಪರಿಷತ್ತಿನ ಅಧ್ಯಕ್ಷ ಟಿ.ಶಂಕರನಾರಾಯಣ ಭಟ್ ಅವರನ್ನು ಒಳಗೊಂಡ ನಿಯೋಗ ಅರ್ಪಿಸಿತು.