ಡ್ರಗ್ಸ್, ಅಕ್ರಮ ಚಟುವಟಿಕೆ ತಡೆಗೆ ಮನವಿ

ಕುಂದಗೋಳ: ಡ್ರಗ್ಸ್ ವ್ಯಸನ ಹಾಗೂ ಇತರ ಅಕ್ರಮ ಚಟುವಟಿಕೆಗಳು ಸಮಾಜಕ್ಕೆ ಮಾರಕ ಪಿಡುಗುಗಳಾಗಿವೆ. ಪಟ್ಟಣದ ಶಾಲೆ, ಕಾಲೇಜು ಆವರಣ ಸೇರಿ ಇತರ ಭಾಗಗಳಲ್ಲಿ ಡ್ರಗ್ಸ್ ಹಾಗೂ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ. ಇವುಗಳಿಗೆ ಕೂಡಲೆ ಕಡಿವಾಣ ಹಾಕಬೇಕು ಎಂದು ನಿರಾಮಯ ಫೌಂಡೇಷನ್ ಸಂಸ್ಥಾಪಕ ಡಾ. ಮಲ್ಲಿಕಾರ್ಜುನ ಬಾಳಿಕಾಯಿ ಅವರು ತಹಸೀಲ್ದಾರ್ ಕಚೇರಿಯಲ್ಲಿ ಗ್ರೇಡ್- 2 ತಹಸೀಲ್ದಾರ್ ಎಸ್.ಎಂ. ದಾನಣ್ಣವರಗೆ ಗುರುವಾರ ಮನವಿ ಸಲ್ಲಿಸಿದರು.

ಬಳಿಕ ಮಾತನಾಡಿದ ಡಾ. ಮಲ್ಲಿಕಾರ್ಜುನ ಬಾಳಿಕಾಯಿ, ಪಟ್ಟಣದ ಕೆಲ ಪ್ರದೇಶಗಳಲ್ಲಿ ಕಳೆದ ಕೆಲ ತಿಂಗಳುಗಳಿಂದ ಮಾದಕ ವಸ್ತುಗಳ ಮಾರಾಟ ನಡೆಯುತ್ತಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಪೇಸ್ಟ್ ರೂಪದಲ್ಲಿ ಮಾದಕ ವಸ್ತು ದೊರೆಯುತ್ತಿದ್ದು, ಎರಡನೇ ತರಗತಿ ಮಕ್ಕಳಿಂದ ಹಿಡಿದು ಕಾಲೇಜು ವಿದ್ಯಾರ್ಥಿಗಳು ಇದರ ಬಲೆಗೆ ಸಿಲುಕಿದ್ದಾರೆಂದು ತಿಳಿದುಬಂದಿದೆ. ಇತ್ತೀಚೆಗೆ ಇದನ್ನು ಸಾಕ್ಷೀಕರಿಸುವಂತಹ ಕೆಲವು ವಿಡಿಯೋ ತುಣುಕುಗಳೂ ಮೊಬೈಲ್​ಗಳಲ್ಲಿ ಹರಿದಾಡುತ್ತಿವೆ. ಇದೊಂದು ಆತಂಕಕಾರಿ ಬೆಳವಣಿಗೆಯಾಗಿದ್ದು ಇದನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ನಡೆಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಮನವಿ ಸ್ವೀಕರಿಸಿ ಮಾತನಾಡಿದ ಗ್ರೇಡ್-2 ತಹಸೀಲ್ದಾರ್ ಎಸ್.ಎಂ. ದಾನಣ್ಣವರ, ಈ ಮನವಿಯನ್ನು ಜಿಲ್ಲಾಧಿಕಾರಿಗಳ ಮೂಲಕ ಶೀಘ್ರವೇ ಸರ್ಕಾರಕ್ಕೆ ರವಾನಿಸಿ ಸೂಕ್ತ ಕಾನೂನು ಕ್ರಮಕ್ಕೆ ಸೂಚಿಸಲಾಗುವುದು ಎಂದು ತಿಳಿಸಿದರು.

ಬಸವರಾಜ ಸಿ.ಎಂ., ವಿಕಾಸ ಕಿರೇಸೂರ, ಮಹೇಶ ಶ್ಯಾಮಳ, ಪ್ರವೀಣ ಮುದ್ದೆಣ್ಣವರ, ಕಿರಣ ಕಲಾಲ, ಅನಿಲ ಮಾವಿನಕಾಯಿ, ಮಂಜು ಛಲವಾದಿ, ಸಾಗರ ಕಿರೇಸೂರ, ಮಂಜು ಅಣ್ಣಿಗೇರಿ, ಕಿರಣ ಗಾಣಿಗೇರ, ಬಸು ಮುಳ್ಳೊಳ್ಳಿ, ಇತರರು ಉಪಸ್ಥಿತರಿದ್ದರು.

Share This Article

Skin care: ಕಣ್ಣುಗಳ ಕೆಳಗಿರುವ ಚರ್ಮ ಸುಕ್ಕುಗಟ್ಟಿದೆಯೇ? ಹೀಗೆ ಮಾಡಿ..

ಕಣ್ಣುಗಳು(Skin care) ಸೂಕ್ಷ್ಮ ಅಂಗಗಳಾಗಿದ್ದು, ಅವುಗಳ ಕೆಳಗಿರುವ ಚರ್ಮವು ಸಹ ಸೂಕ್ಷ್ಮವಾಗಿರುತ್ತದೆ. ಬಿಸಿಲು, ಪೌಷ್ಠಿಕ ಆಹಾರದ…

Health Tips : ಮೆಟ್ಟಿಲು ಹತ್ತುವಾಗ ಸುಸ್ತಾಗುತ್ತದಾ..! ಈ ಸಲಹೆಗಳನ್ನು ಅನುಸರಿಸಿ

ಬೆಂಗಳೂರು: ಮೆಟ್ಟಿಲು ಹತ್ತುವಾಗ ಉಸಿರಾಟದ ತೊಂದರೆ ಸಾಮಾನ್ಯ. ಈ ಸಮಸ್ಯೆಯು ವಯಸ್ಸಾದಂತೆ ಹೆಚ್ಚಾಗುತ್ತಿದೆ, ಆದರೆ ಇತ್ತೀಚಿನ…