More

    ಅವಧಿ ವಿಸ್ತರಣೆಗೆ ಕೇಂದ್ರಕ್ಕೆ ಮನವಿ

    ಹುಬ್ಬಳ್ಳಿ: ಕಳೆದ 2 ವರ್ಷಗಳ ಅವಧಿಯಲ್ಲಿ ಕೋವಿಡ್​ನಿಂದ ಸ್ಮಾರ್ಟ್ ಸಿಟಿ ಕಾಮಗಾರಿಗಳಿಗೆ 7-8 ತಿಂಗಳು ಕೂಲಿ ಕಾರ್ವಿುಕರ ಕೊರತೆಯಿಂದ ತೊಂದರೆಯಾಗಿದ್ದು, ನಿಗದಿತ ಅವಧಿಯಲ್ಲಿ ಕೆಲ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸಾಧ್ಯವಾಗಿಲ್ಲ. ಈ ಕಾರಣಕ್ಕೆ ರಾಜ್ಯದ ವಿವಿಧ ನಗರಗಳ ಸ್ಮಾರ್ಟ್ ಸಿಟಿ ಪ್ರಾಜೆಕ್ಟ್​ಗಳಿಗೆ 1ರಿಂದ 2 ವರ್ಷಗಳ ಅವಧಿ ವಿಸ್ತರಣೆ ಕೋರಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೇವೆ ಎಂದು ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ ತಿಳಿಸಿದರು.

    ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್ ಸಿಟಿ ಯೋಜನೆಯ 21.10 ಕೋಟಿ ರೂಪಾಯಿ ವೆಚ್ಚದ ಸ್ಮಾರ್ಟ್ ರಸ್ತೆ ಪ್ಯಾಕೇಜ್-4 ಹಾಗೂ 18.40 ಕೋಟಿ ರೂ. ವೆಚ್ಚದ ಸ್ಮಾರ್ಟ್ ರಸ್ತೆ -ಎಂಎಸ್​ಎಂಇ ಅಡಿ ನಿರ್ವಣಗೊಂಡ ರಸ್ತೆಗಳ ಲೋಕಾರ್ಪಣೆ ಕಾರ್ಯಕ್ರಮವನ್ನು ಸೋಮವಾರ ಗೋಕುಲ ರಸ್ತೆ ಕೈಗಾರಿಕಾ ವಸಾಹತು ಗೇಟ್ ನಂ. 1ರ ಬಳಿ ಉದ್ಘಾಟಿಸಿ ಮಾತನಾಡಿದ ಅವರು, ಅಭಿವೃದ್ಧಿಯ ವೇಗಕ್ಕೆ ಕೋವಿಡ್ ಪೆಟ್ಟು ನೀಡಿದೆ. ಆದರೂ, ರಾಜ್ಯ ಸರ್ಕಾರ ಅಭಿವೃದ್ಧಿ ಕಾಮಗಾರಿಗಳನ್ನು ಸ್ಥಗಿತಗೊಳಿಸಿಲ್ಲ ಎಂದು ಹೇಳಿದರು.

    ನಗರಗಳ ಸಾಮರ್ಥ್ಯ ವೃದ್ಧಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಾತನಾಡಿ, ನಗರಗಳ ಸಾಮರ್ಥ್ಯ ವೃದ್ಧಿ ಹಾಗೂ ಅಭಿವೃದ್ಧಿಯಲ್ಲಿ ಜನರ ಪಾಲ್ಗೊಳ್ಳುವಿಕೆ ಹೆಚ್ಚಿಸುವುದು ಸ್ಮಾರ್ಟ್ ಸಿಟಿ ಯೋಜನೆಯ ಉದ್ದೇಶವಾಗಿತ್ತು. ಈ ನಿಟ್ಟಿನಲ್ಲಿ ರಾಜ್ಯದ ಒಂದೆರಡು ‘ಸ್ಮಾರ್ಟ್ ಸಿಟಿ’ ನಗರಗಳನ್ನು ಮಾದರಿಯಾಗಿ ರೂಪಿಸಬೇಕಿದೆ. ಮಹಾನಗರ ಪಾಲಿಕೆಗಳು ತೆರಿಗೆ ಸಂಗ್ರಹದಲ್ಲಿ ಸೋರಿಕೆಯನ್ನು ತಡೆದರೆ ಸರ್ಕಾರಗಳಿಂದ ಹಣ ಕೇಳುವ ಅವಶ್ಯಕತೆಯೇ ಬರುವುದಿಲ್ಲ ಎಂದರು.

    ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ದೇಶದ ಸಾಧನೆಯನ್ನು ಅಲ್ಲಗಳೆಯಲು ಸಾಧ್ಯವಿಲ್ಲ. ಸಾಕಷ್ಟು ಅಪಪ್ರಚಾರದ ನಡುವೆಯೂ ಜೂನ್ 21ರಿಂದ ಇಲ್ಲಿಯವರೆಗೆ 12 ಕೋಟಿ, ಒಟ್ಟಾರೆ 37 ಕೋಟಿ ಜನರಿಗೆ ಕರೊನಾ ಪ್ರತಿರೋಧಕ ಲಸಿಕೆ ನೀಡಿದ್ದೇವೆ. ಗ್ರಾಮೀಣ ಭಾಗಗಳಿಗೆ ನಿರಂತರ ವಿದ್ಯುತ್ ಸರಬರಾಜು ಮಾಡಲು ಇತ್ತೀಚೆಗೆ 90 ಸಾವಿರ ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.

    22ರಂದು ಸಭೆ: ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಮಾತನಾಡಿ, ಕೈಗಾರಿಕೆಗಳನ್ನು ವಾಣಿಜ್ಯ ಬಳಕೆ ಆಸ್ತಿ ತೆರಿಗೆಯಿಂದ ಬೇರ್ಪಡಿಸಿ ಪ್ರತ್ಯೇಕ ತೆರಿಗೆ ಪಾವತಿ ವ್ಯವಸ್ಥೆಯಡಿ ತರಲು ಚಿಂತಿಸಲಾಗಿದೆ. ಇಲ್ಲಿ ಆಸ್ತಿ ತೆರಿಗೆ ಪ್ರಮಾಣವು ಗೃಹ ಬಳಕೆ ಕಟ್ಟಡಕ್ಕಿಂತ ಹೆಚ್ಚು, ವಾಣಿಜ್ಯ ಬಳಕೆ ಕಟ್ಟಡಕ್ಕಿಂತ ಕಡಿಮೆ ಇರಲಿದೆ. ಈ ಕುರಿತು ರ್ಚಚಿಸಲು ಜು. 22ರಂದು ಬೆಂಗಳೂರಿನಲ್ಲಿ ನಗರಾಭಿವೃದ್ಧಿ ಇಲಾಖೆ ಹಾಗೂ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಗಳ ಜಂಟಿ ಸಭೆ ಕರೆಯಲಾಗಿದೆ ಎಂದು ತಿಳಿಸಿದರು.

    ಇಂಡಸ್ಟ್ರಿಯಲ್ ಕಾರಿಡಾರ್ ಯೋಜನೆಯಡಿ ಧಾರವಾಡ ಬೇಲೂರು ಕೈಗಾರಿಕಾ ವಸಾಹತು ಪ್ರದೇಶದಿಂದ ಮುಂದೆ 5 ಸಾವಿರ ಎಕರೆ ಭೂ ಸ್ವಾಧೀನಕ್ಕೆ ನಿರ್ಣಯಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಅಕ್ಕ ಪಕ್ಕ ಕೈಗಾರಿಕೆಗಳು ಸ್ಥಾಪನೆಯಾಗಲಿವೆ. ಇದಕ್ಕೆ ಕೇಂದ್ರ ಸರ್ಕಾರ ನೆರವು ನೀಡಲಿದೆ ಎಂದರು.

    ಶಾಸಕರಾದ ಅರವಿಂದ ಬೆಲ್ಲದ, ಶಂಕರ ಪಾಟೀಲ ಮುನೇನಕೊಪ್ಪ, ವಿ.ಪ. ಸದಸ್ಯ ಪ್ರದೀಪ ಶೆಟ್ಟರ್, ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ, ಪಾಲಿಕೆ ಮಾಜಿ ಸದಸ್ಯ ಮಹೇಶ ಬುರ್ಲಿ, ಪಾಲಿಕೆ ಆಯುಕ್ತ ಡಾ. ಸುರೇಶ ಇಟ್ನಾಳ, ಹು-ಧಾ ಸ್ಮಾರ್ಟ್ ಸಿಟಿ ಎಂ.ಡಿ. ಶಕೀಲ ಅಹ್ಮದ್ ಇತರರು ಇದ್ದರು.

    ಹಳೇ ಬಸ್ ನಿಲ್ದಾಣ ಪುನರ್ ನಿರ್ಮಾಣ

    ಸ್ಮಾರ್ಟ್ ಸಿಟಿ ಯೋಜನೆಯ 35.38 ಕೋಟಿ ರೂ. ವೆಚ್ಚದಲ್ಲಿ ಹುಬ್ಬಳ್ಳಿಯ ಹಳೇ ಬಸ್ ನಿಲ್ದಾಣ ಪುನರ್​ನಿರ್ವಣ ಕಾಮಗಾರಿಗೆ ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ ಭೂಮಿ ಪೂಜೆ ನೆರವೇರಿಸಿದರು.

    ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಾಮಗಾರಿಯನ್ನು 18 ತಿಂಗಳಲ್ಲಿ ಪೂರ್ಣಗೊಳಿಸಲಾಗುವುದು. ಗುಣಮಟ್ಟದ ಕಾಮಗಾರಿ ಕೈಗೊಳ್ಳುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ. ನಿಯಮಿತವಾಗಿ ಈ ಕಾಮಗಾರಿಯ ಪ್ರಗತಿ ಪರಿಶೀಲನೆಯನ್ನು ನಾನು ಖುದ್ದಾಗಿ ನಡೆಸಲಿದ್ದೇನೆ ಎಂದರು.

    ನಾನು ನಗರಾಭಿವೃದ್ಧಿ ಸಚಿವನಾಗುವ ಮೊದಲೇ ಬಿಆರ್​ಟಿಎಸ್ ಯೋಜನೆ ಜಾರಿಗೆ ಬಂದಿದ್ದು. ಕಂಡು ಬಂದಿರುವ ಲೋಪದೋಷಗಳನ್ನು ಸರಿಪಡಿಸುವ ಜವಾಬ್ದಾರಿ ನನ್ನ ಮೇಲಿದೆ. ಹಳೇ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ರ್ಪಾಂಗ್, ಪ್ರಥಮ ಚಿಕಿತ್ಸೆ, ಉಪಾಹಾರ ಗೃಹ, ಅನೇಕ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ ಎಂದು ಹೇಳಿದರು.

    ವಾಕರಸಾ ಸಂಸ್ಥೆಯ ಎಂ.ಡಿ. ಕೃಷ್ಣ ಬಾಜಪೇಯಿ, ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts