ಮುಖ್ಯಮಂತ್ರಿ, ಕಂದಾಯ ಸಚಿವರಿಗೆ ಮನವಿ

kr
Published on

ಹೆಬ್ರಿ: ಗ್ರಾಮ ಆಡಳಿತಾಧಿಕಾರಿಗಳು ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಹೆಬ್ರಿ ತಾಲೂಕು ಕಚೇರಿ ಆವರಣದಲ್ಲಿ ಮುಷ್ಕರ ನಡೆಸುತ್ತಿದ್ದು, ಬೇಡಿಕೆಗಳನ್ನು ಶೀಘ್ರ ಈಡೇರಿಸುವಂತೆ ಪಂಚಾಯತ್‌ರಾಜ್ ಒಕ್ಕೂಟ ಮಾಜಿ ಅಧ್ಯಕ್ಷ ನೀರೆ ಕೃಷ್ಣ ಶೆಟ್ಟಿ ಗುರುವಾರ ಮುಖ್ಯಮಂತ್ರಿ ಮತ್ತು ಕಂದಾಯ ಸಚಿವರಿಗೆ ಮನವಿ ನೀಡಿದ್ದಾರೆ. ಇತ್ತೀಚೆಗೆ ಹೆಚ್ಚಾಗಿ ಮಹಿಳೆಯರೇ ಗ್ರಾಮ ಆಡಳಿತಾಧಿಕಾರಿಗಳಿದ್ದು ಅವರಿಗೆ ಮೂಲಸೌಕರ್ಯ ನೀಡಬೇಕು. 1956ರಲ್ಲಿ ಇದ್ದ ಗ್ರಾಮ ಕಂದಾಯ ವೃತ್ತ ಬದಲಿಸಿ ಕನಿಷ್ಠ ಗ್ರಾಪಂ 1ರಂತೆ ಗ್ರಾಮ ಆಡಳಿತಾಧಿಕಾರಿಗಳ ನೇಮಕ ಮಾಡುವಂತೆ ನೀರೆ ಕೃಷ್ಣ ಶೆಟ್ಟಿ ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net