More

    ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮತ ನೀಡುವಂತೆ ಮನವಿ

    ಚಿಕ್ಕಮಗಳೂರು: ಕಾಂಗ್ರೆಸ್ ನೇತೃತ್ವದ ಸರ್ಕಾರ ಕಳೆದ ಹತ್ತಾರು ವರ್ಷಗಳಲ್ಲಿ ರಾಜ್ಯದ ಶಿಕ್ಷಕರು ಮತ್ತು ಪದವೀಧರರಿಗೆ ಅನೇಕ ಸೌಲಭ್ಯಗಳನ್ನು ನೀಡಿದೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಒಂದು ಮತ ನೀಡಿ ಋಣ ತೀರಿಸುವ ಅವಕಾಶ ಬಂದಿರುವುದರಿAದ ಎಲ್ಲ ಫಲಾನುಭವಿ ಶಿಕ್ಷಕರು ಮತ್ತು ಪದವೀಧರರು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಮತ ನೀಡಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪದವೀಧರ ಘಟಕದ ರಾಜ್ಯಾಧ್ಯಕ್ಷ ಡಾ. ಆರ್.ಎಂ ಕುಬೇರಪ್ಪ ಮನವಿ ಮಾಡಿದರು.

    ನಗರದ ಪ್ರೆಸ್‌ಕ್ಲಬ್‌ನಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ೬ನೇ ವೇತನ ಆಯೋಗದ ಎಲ್ಲ ಶಿಫಾರಸ್ಸುಗಳನ್ನು ಯಥಾವತ್ತಾಗಿ ಆಗಿನ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಜಾರಿಗೊಳಿಸಿದ್ದರು. ಇದರಿಂದ ಕನಿಷ್ಠ ೧೦ ಸಾವಿರದಿಂದ ೨೦ ಸಾವಿರದವರೆಗೆ ನೌಕರರ ವೇತನ ಹೆಚ್ಚಳವಾಗಿದೆ ಎಂದರು.
    ಅವರ ಹಿಂದಿನ ಅವಧಿಯಲ್ಲಿ ಲಕ್ಷಗಟ್ಟಲೇ ಉದ್ಯೋಗಗಳನ್ನು ಸೃಷ್ಟಿಸಿ ನಿರುದ್ಯೋಗಿ ಪದವೀಧರರಿಗೆ ಉದ್ಯೋಗ ನೀಡಿದ್ದಾರೆ. ೨೫ ವರ್ಷಗಳಿಂದ ರಾಜ್ಯದ ಅನುದಾನಿತ ಪದವಿ ಕಾಲೇಜುಗಳಲ್ಲಿ ಖಾಲಿಯಾದ ಹುದ್ದೆಗಳನ್ನು ತುಂಬಲು ಅನುಮತಿ ನೀಡಿದ್ದರಿಂದ ಪಿಎಚ್‌ಡಿ ಪಡೆದು ನಿರುದ್ಯೋಗಿಯಾಗಿದ್ದ ಸಾವಿರಾರು ಯುವಕರಿಗೆ ಉದ್ಯೋಗದ ಅವಕಾಶಗಳನ್ನು ನೀಡಿದ್ದಾರೆ ಎಂದು ಹೇಳಿದರು.
    ಕಾಂಗ್ರೆಸ್ ಸರ್ಕಾರ ನೀಡಿದ ಪಂಚ ಗ್ಯಾರಂಟಿಗಳಲ್ಲಿ ನಿರುದ್ಯೋಗ ಪದವೀಧರ ಯುವಕ ಯುವತಿಯರಿಗೆ ತಿಂಗಳಿಗೆ ೩೦೦೦ ರೂಪಾಯಿ, ಡಿಪ್ಲೋಮಾ ಪದವೀಧರರಿಗೆ ತಿಂಗಳಿಗೆ ೧೫೦೦ ನಗದು ಹಣ ಪ್ರತಿ ತಿಂಗಳು ನೀಡುತ್ತಿದ್ದಾರೆ. ಇತ್ತೀಚೆಗೆ ಅತಿಥಿ ಉಪನ್ಯಾಸಕರು ಮಾಡಿದ ಹೋರಾಟಕ್ಕೆ ಸ್ಪಂದಿಸಿದ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಎಲ್ಲ ಅತಿಥಿ ಉಪನ್ಯಾಸಕರಿಗೆ ಅವರ ವೇತನವನ್ನು ತಿಂಗಳಿಗೆ ಕನಿಷ್ಠ ೩೮ ಸಾವಿರದಿಂದ ೪೨ ಸಾವಿರದವರೆಗೆ ಹೆಚ್ಚಿಸಿದ್ದಾರೆ ಎಂದು ಮಾಹಿತಿ ನೀಡಿದರು.
    ನೌಕರರಿಗೆ ಆರೋಗ್ಯ ವಿಮೆ, ನಿವೃತ್ತಿ ಹೊಂದುವಾಗ ಪ್ರತಿಯೊಬ್ಬರಿಗೂ ೫ ಲಕ್ಷ ಇಡಿಗಂಟು ಹಣ ನೀಡುವುದಾಗಿ ಆದೇಶ ಮಾಡಲಾಗಿದೆ. ಈಗಾಗಲೇ ೭ನೇ ವೇತನ ಆಯೋಗದ ಶಿಫಾರಸ್ಸಿನ ಅನ್ವಯ ಮಧ್ಯಂತರ ಪರಿಹಾರವನ್ನು ಘೋಷಿಸಲಾಗಿದೆ. ಅತಿ ಶೀಘ್ರದಲ್ಲೇ ೭ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಜಾರಿ ಮಾಡಲಿದ್ದಾರೆ. ರಾಜ್ಯದ ಎಲ್ಲ ಅನುದಾನಿತ ಶಾಲಾ- ಕಾಲೇಜುಗಳಲ್ಲಿ ನಿವೃತ್ತಿ-ನಿಧನದಿಂದ ಖಾಲಿಯಾದ ಶಿಕ್ಷಕರ ಹುದ್ದೆಗಳನ್ನು ೨೦೧೫ ರವರೆಗೆ ತುಂಬಲಾಗಿದೆ ಎಂದು ವಿವರಿಸಿದರು.
    ೨೦೨೩ರ ಚುನಾವಣಾ ಪ್ರಣಾಳಿಕೆಯಲ್ಲಿ ರಾಜ್ಯದ ಅನುದಾನರಹಿತ ಶಾಲಾ ಕಾಲೇಜುಗಳನ್ನು ಆದ್ಯತೆ ಮೇರೆಗೆ ಹಂತ-ಹAತವಾಗಿ ಅನುದಾನಕ್ಕೂಳಪಡಿಸುವ ಭರವಸೆ ನೀಡಿದ್ದಾರೆ. ಹೀಗೆ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಶಿಕ್ಷಕರು ಮತ್ತು ಪದವೀಧರರಿಗೆ ಸಾಲು-ಸಾಲು ಸೌಲಭ್ಯಗಳನ್ನು ನೀಡಿರುವುದರಿಂದ ಮತ್ತು ಈಗಾಗಲೇ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಲು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ ಎಂದರು.
    ನಾಡಿನ ಬುದ್ಧಿವಂತ ಪದವೀಧರರು ಮತ್ತು ಶಿಕ್ಷಕರು ಅತ್ಯಂತ ಪ್ರಾಮಾಣಿಕವಾಗಿ ಸ್ಪಂದಿಸಿ, ಶಿಕ್ಷಕರ ಮತ್ತು ಪದವೀಧರರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ಕೆ.ಕೆ ಮಂಜುನಾಥ್‌ಕುಮಾರ್ ಹಾಗೂ ಆಯನೂರು ಮಂಜುನಾಥ್ ಇವರುಗಳನ್ನು ಅತೀ ಹೆಚ್ಚಿನ ಮತ ನೀಡಿ ಆಯ್ಕೆ ಮಾಡಬೇಕು ಎಂದು ಮನವಿ ಮಾಡಿದರು.
    ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಎಚ್.ಪಿ.ಮಂಜೇಗೌಡ, ಎನ್.ಡಿ.ಚಂದ್ರಪ್ಪ, ಎಂ.ಸಿ.ಶಿವಾನAದಸ್ವಾಮಿ, ಶಂಕರ್ ಮೇವಾಡಿ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts